ಜೈಪುರ: ಶೇ.5ರಷ್ಟು ಮೀಸಲಾತಿ ನೀಡಲು ರಾಜಸ್ಥಾನ ಸರ್ಕಾರ ಒಪ್ಪಿಕೊಂಡ ಹಿನ್ನಲೆಯಲ್ಲಿ ಗುಜ್ಜರ್ ಸಮುದಾಯ ತನ್ನ ಪ್ರತಿಭಟನೆಯನ್ನು ಕೈಬಿಟ್ಟಿದೆ.
ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಗುಜ್ಜರ್ ಸಮುದಾಯಕ್ಕೆ ಶೇ.5ರಷ್ಟು ಮೀಸಲಾತಿಯನ್ನು ನೀಡುವ ಸಲುವಾಗಿ ಕಾಯ್ದೆಯನ್ನು ಅಂಗೀಕರಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ.
ಈ ಹಿನ್ನಲೆಯಲ್ಲಿ ಕಳೆದ 8 ದಿನಗಳಿಂದ ನಡೆಸುತ್ತಿದ್ದ ಉಗ್ರ ಪ್ರತಿಭಟನೆಯನ್ನು ಗುಜ್ಜರ್ ಸಮುದಾಯ ಹಿಂಪಡೆದಿದೆ.
ರೈಲ್ವೇ ತಡೆ ನಡೆಸಿ, ವಾಹನಗಳನ್ನು ತಡೆದು, ಸಾರ್ವಜನಿಕ ಜೀವನಕ್ಕೆ ಧಕ್ಕೆಯಾಗುವಂತೆ ಪ್ರತಿಭಟನೆ ನಡೆಸಲಾಗುತ್ತಿತ್ತು, ಈ ಪ್ರತಿಭಟನೆಯನ್ನು ಹತ್ತಿಕ್ಕಲು ನಿನ್ನೆಯಷ್ಟೇ ಕೇಂದ್ರ 4,500 ಪ್ಯಾರಾ ಮಿಲಿಟರಿ ಪಡೆಗಳನ್ನು ರಾಜಸ್ಥಾನಕ್ಕೆ ಕಳುಹಿಸಿಕೊಟ್ಟಿತ್ತು.
ಹೈಕೋರ್ಟ್ ಕೂಡ ಪ್ರತಿಭಟನೆ ನಡೆಸುತ್ತಿದ್ದ ಗುಜ್ಜರ್ ನಾಯಕರನ್ನು ಯಾಕೆ ಬಂಧಿಸಿಲ್ಲ ಎಂದು ರಾಜಸ್ಥಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.
ಒಟ್ಟಿನಲ್ಲಿ ಕಳೆದ 8 ದಿನಗಳಿಂದ ಪ್ರತಿಭಟನೆಯಿಂದ ಬೇಸತ್ತಿದ್ದ ಜನರಿಗೆ ಇದೀಗ ನೆಮ್ಮದಿ ಸಿಕ್ಕಂತಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.