ನವದೆಹಲಿ: ಕೇಂದ್ರ ಸಚಿವ ಕೆ.ಜೆ ಅಲ್ಫೋನ್ಸ್ ಅವರು ರಾಜಸ್ಥಾನದಿಂದ ರಾಜ್ಯಸಭಾ ಸಂಸದನಾಗಿ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಇಲ್ಲಿ ಕಣಕ್ಕಿಳಿಸಿರಲಿಲ್ಲ.
ಸಂಸದರಾಗಿದ್ದ ವೆಂಕಯ್ಯ ನಾಯ್ಡು ಅವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಉಪಚುನಾವಣೆ ನಡೆಯುವುದು ಅನಿವಾರ್ಯವಾಗಿತ್ತು.
ಸಂಸದೀಯ ಸಭೆಯ ಕಾರ್ಯದರ್ಶಿ ಪೃಥ್ವಿರಾಜ್ ಅವರು ಅಲ್ಫೋನ್ಸ್ ಅವರ ಆಯ್ಕೆಯನ್ನು ಖಚಿತಪಡಿಸಿಕೊಂಡಿದ್ದಾರೆ.
ತನ್ನ ಆಯ್ಕೆಯ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಅಲ್ಫೋನ್ಸ್ ಅವರು, ‘ನಾನು ಕೇರಳದಿಂದ ಬಂದವನಾಗಿದ್ದೇನೆ. ಆದರೀಗ ನಾನು ರಾಜಸ್ಥಾನಿ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.