ನವದೆಹಲಿ: ಖಾಸಗಿ ಆಸ್ಪತ್ರೆಯೊಂದರಿಂದ ತರಲಾಗುತ್ತಿದ್ದ ರೇಡಿಯೋ ಆಕ್ಟಿವ್ ವಿಕಿರಣ ದೆಹಲಿಯ ಇಂದಿರಾ ಗಾಂಧೀ ವಿಮಾನನಿಲ್ದಾಣದ ಕಾರ್ಗೋ ಏರಿಯಾದಲ್ಲಿ ಸೋರಿಕೆಯಾದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಟರ್ಕಿಶ್ ಏರ್ಲೈನ್ಸ್ಗೆ ಸೇರಿದ ವಿಮಾನದಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಬಳಸುವ ರೇಡಿಯೋ ಆಕ್ಟಿವ್ ವಿಕಿರಣ ಉಪಕರಣದ ೧೦ ಪ್ಯಾಕೆಟ್ ಗಳನ್ನು ವಿಶೇಷ ಮೆಡಿಕಲ್ ಕಿಟ್ನಲ್ಲಿ ತರಲಾಗುತ್ತಿತ್ತು. ಈ ಪೈಕಿ 4 ಪ್ಯಾಕ್ಗಳ ವಿಕಿರಣ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಟರ್ಕಿಶ್ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಈ ವಿಕಿರಣರವನ್ನು ಬ್ಲಾಕ್ ಮಾಡಲಾಗಿದೆ ಎಂದು ಗೃಹಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಭಯಭೀತರಾಗುವ ಅಗತ್ಯವಿಲ್ಲ, ಇದರಿಂದ ವಿಮಾನ ಕಾರ್ಯಾಚರಣೆಗೆ ಯಾವುದೇ ಅಡ್ಡಿಯುಂಟಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಮೆಡಿಕಲ್ ಕಿಟ್ ತರುತ್ತಿದ್ದ ಇಬ್ಬರು ತಕ್ಷಣವೇ ಸ್ಥಳೀಯ ಎಐಐಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ವಿಕಿರಣ ಸೋರಿಕೆಯಾಗಲು ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.