ನವದೆಹಲಿ: ಭಾರತದ ಸಹಾಯದೊಂದಿಗೆ ಭೂತಾನಿನಲ್ಲಿ ಮೊತ್ತ ಮೊದಲ ಕ್ಯಾನ್ಸರ್ ಆಸ್ಪತ್ರೆ ತಲೆ ಎತ್ತಲಿದೆ. 2018ರಲ್ಲಿ ಉಭಯ ದೇಶಗಳು ತಮ್ಮ ರಾಜತಾಂತ್ರಿಕ ಸಂಬಂಧದ 50 ವರ್ಷಗಳನ್ನು ಆಚರಿಸಿಕೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ತನ್ನ ನೆಲದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವಂತೆ ಭಾರತ ಸರ್ಕಾರಕ್ಕೆ ಭೂತಾನ್ ಮನವಿ ಮಾಡಿಕೊಂಡಿದೆ.
ಅಕ್ಟೋಬರ್ನಲ್ಲಿ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿಗಳು ಭೂತಾನ್ಗೆ ಭೇಟಿಕೊಟ್ಟಿದ್ದ ಸಂದರ್ಭ ಈ ಮನವಿಯನ್ನು ಮಾಡಲಾಗಿದೆ. ಈ ಮನವಿಗೆ ಭಾರತದ ಸರ್ಕಾರ ಸಕರಾತ್ಮಕವಾಗಿಯೇ ಸ್ಪಂದಿಸಿದೆ ಮತ್ತು ಈ ಬಗ್ಗೆ ವಿಸ್ತೃತ ಯೋಜನಾ ವರದಿ ನೀಡುವಂತೆ ಕೇಳಿದೆ.
797765 ಜನಸಂಖ್ಯೆಯುಳ್ಳ ಭೂತಾನ್ ಭಾರತದ ಸಹಕಾರದೊಂದಿಗೆ ಸಾಕಷ್ಟು ಅಭಿವೃದ್ಧಿ ಕಂಡಿದ್ದು, ಇದೀಗ ಅದು ಆತ್ಯಾಧುನಿಕ ಸೌಲಭ್ಯದ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡುವಂತೆ ಕೋರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.