ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಈ ವರ್ಷದ ಇಂದಿರಾ ಗಾಂಧಿ ಶಾಂತಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.
‘ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ, ವಿಶ್ವದಲ್ಲಿ ಭಾರತದ ಸ್ಥಾನಮಾನ ಹೆಚ್ಚಿಸಿದ ಕಾರಣಕ್ಕೆ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ’ ಎಂದು ಇಂದಿರಾ ಗಾಂಧಿ ಮೆಮೋರಿಯಲ್ ಟ್ರಸ್ಟ್ ಹೇಳಿದೆ.
ಮಾಜಿ ಪ್ರಧಾನಿಗಳು ಮತ್ತು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರನ್ನೊಳಗೊಂಡ ಜ್ಯೂರಿಗಳು ಮನಮೋಹನ್ ಸಿಂಗ್ ಅವರನ್ನು ಅವಿರೋಧವಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.