ಬೆಂಗಳೂರು: ಜನಪ್ರತಿನಿಧಿಗಳು ಮತ್ತು ಸರ್ಕಾರಿ ನೌಕರರ ಮಕ್ಕಳು ಇನ್ನು ಮುಂದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುವುದು ಕಡ್ಡಾಯವಾಗಲಿದೆ. ಈ ನಿಟ್ಟಿನಲ್ಲಿ ವಿಧಾನಸಬೆಯಲ್ಲಿ ಮಸೂದೆ ಮಂಡನೆಗೊಳ್ಳುವ ಸಾಧ್ಯತೆ ಇದೆ.
ಗ್ರಾಮ ಪಂಚಾಯತ್ನ ಡಿ ದರ್ಜೆ ನೌಕರರಿಂದ ಹಿಡಿದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೆಗೆ ಹುದ್ದೆಯ ನೌಕರರು ಮತ್ತು ಜನಪ್ರತಿನಿಧಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುವುದು ಈ ಮಸೂದೆಯ ಅನುಸಾರ ಕಡ್ಡಾಯವಾಗಲಿದೆ.
ಈ ಮಸೂದೆಯಿಂದ ಸಮಾನ ಶಿಕ್ಷಣದ ಕನಸು ಸಾಕಾರಗೊಳ್ಳಲಿದೆ. ಸರ್ಕಾರಿ ಶಾಲೆಗಳಲ್ಲೂ ಮೂಲಸೌಕರ್ಯ ಅಭಿವೃದ್ಧಿಯಾಗಲಿದೆ ಎಂಬ ಭರವಸೆಯನ್ನು ಸಚಿವ ತನ್ವೀರ್ ಸೇಠ್ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.