ಮುಂಬಯಿ: ಇನ್ನು ಮುಂದೆ ಮಹಾರಾಷ್ಟ್ರದಲ್ಲಿ ಪ್ಲಾಸ್ಟಿಕ್ ತಯಾರಕ ಸಂಸ್ಥೆಗಳು ಮತ್ತು ಮಿನರಲ್ ವಾಟರ್ ಸಂಸ್ಥೆಗಳು ರಿಸೈಕ್ಲಿಂಗ್ ಪ್ಲಾಂಟ್ಗಳನ್ನು ಸ್ಥಾಪಿಸುವುದು ಕಡ್ಡಾಯವಾಗಲಿದೆ.
ರಿಸೈಕ್ಲಿಂಗ್ ಘಟಕಗಳನ್ನು ಸ್ಥಾಪಿಸಿ, ಇಲ್ಲವೇ ನಿಮ್ಮ ಸಂಸ್ಥೆಯನ್ನೇ ಮುಚ್ಚುತ್ತೇವೆ ಎಂದು ಅಲ್ಲಿನ ಸರ್ಕಾರ ಈ ಪ್ಲಾಸ್ಟಿಕ್ ಉತ್ಪಾದಕರಿಗೆ, ಮಿನರಲ್ ವಾಟರ್ ಸಂಸ್ಥೆಗಳಿಗೆ ಎಚ್ಚರಿಕೆಯನ್ನು ನೀಡಿದೆ.
ಇಲ್ಲಿ ಉತ್ಪಾದನೆಯಾಗುವ ಪ್ಲಾಸ್ಟಿಕ್ ಬಾಟಲ್ಗಳನ್ನು ಮರು ಬಳಕೆ ಮಾಡುವ ಸಲುವಾಗಿ ಈ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ.
ಈಗಾಗಲೇ ಅಲ್ಲಿನ ಸರ್ಕಾರಿ ಕಛೇರಿಗಳಲ್ಲಿ, ಸ್ಟಾರ್ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.