ಮುಂಬಯಿ: ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿರುವ ಮಹಾರಾಷ್ಟ್ರ ಸರ್ಕಾರ ತನ್ನ ರಾಜ್ಯದ ಎಂಬಿಬಿಎಸ್ ಪದವೀಧರರು ಒಂದು ವರ್ಷಗಳ ಕಾಲ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಿದೆ.
2018-19ರ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಅಲ್ಲಿ ಜಾರಿಗೆ ಬರಲಿದೆ ಎಂದು ಸರ್ಕಾರ ಹೊರಡಿಸಿರುವ ಪ್ರಕಟನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಅಲ್ಲದೇ ಮುಂದಿನ ವರ್ಷದಿಂದ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಿದ ಎಂಬಿಬಿಎಸ್ ಪದವೀಧರರು ಮಾತ್ರ ಸ್ನಾತಕೋತ್ತರ ಪದವಿ ಪಡೆಯಲು ಅರ್ಹರಾಗಿರುತ್ತಾರೆ ಎಂದಿದೆ.
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ನಿಯಮ ಈಗಾಗಲೇ ಜಾರಿಯಲ್ಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.