ನವದೆಹಲಿ: ಯೆಮೆನ್ನಲ್ಲಿನ ಬಿಕ್ಕಟ್ಟು ಉಲ್ಭಣಿಸಿದೆ. ಅಲ್ಲಿರುವ ಭಾರತೀಯರ ಸುರಕ್ಷತೆ ಈಗ ಭಾರತ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಭಾರತೀಯರನ್ನು ವಾಪಸ್ ಕರೆ ತರಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ ಎಂದಿದ್ದಾರೆ.
ಟ್ವೀಟ್ ಮಾಡಿರುವ ಅವರು ‘ಯಮೆನ್ನಲ್ಲಿರುವ ಭಾರತೀಯರನ್ನು ಆದಷ್ಟು ಬೇಗ ಕರೆತರಲು ಜಲ, ವಾಯು ಮತ್ತು ನೆಲಮಾರ್ಗ ಎಲ್ಲವನ್ನೂ ಬಳಕೆ ಮಾಡುತ್ತೇವೆ’ ಎಂದಿದ್ದಾರೆ.
ಎರಡು ಹಡಗುಗಳನ್ನು ಯೆಮೆನ್ಗೆ ಕಳುಹಿಸಿಕೊಡಲಾಗಿದೆ. ಅದರ ಮೂಲಕ ಹಲವಾರು ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಲಿದ್ದಾರೆ. ಆದರೆ ಹಡಗು ಅಲ್ಲಿಗೆ ತಲುಪಲು ಐದು ದಿನಗಳು ಬೇಕು. ಹೀಗಾಗೀ ವಾಯು ಮಾರ್ಗದ ಮೂಲಕವೂ ಭಾರತೀಯರನ್ನು ಕರೆತರುವ ಪ್ರಯತ್ನ ನಡೆದಿದೆ. ಇದಕ್ಕಾಗಿ ಸೌದಿ ಸರ್ಕಾರವನ್ನು ನಾವು ಸಂಪರ್ಕಿಸುತ್ತಿದ್ದೇವೆ ಎಂದಿದ್ದಾರೆ.
ಯೆಮೆನ್ನಲ್ಲಿನ ಭಾರತೀಯ ರಾಯಭಾರ ಕಛೇರಿ ಕೂಡ ಭಾರತೀಯರ ರಕ್ಷಣೆಗೆ ಸರ್ವ ಪ್ರಯತ್ನಗಳನ್ನು ಮಾಡುತ್ತಿದೆ. ಇಲ್ಲಿ 3 ಸಾವಿರಕ್ಕೂ ಅಧಿಕ ಭಾರತೀಯರಿದ್ದ ಕೇರಳದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.