ಮಂಗಳೂರು : ಒಬ್ಬ ವ್ಯಕ್ತಿಗೆ ಮನೆಯಲ್ಲಿ ಸಿಗುವ ಸಂಸ್ಕಾರ ಆತನ ವ್ಯಕ್ತಿತ್ವ್ವವನ್ನು ರೂಪಿಸುವಲ್ಲಿ ಪ್ರಧಾನ ಪಾತ್ರವನ್ನು ವಹಿಸುತ್ತದೆ. ಪ್ರಾಮಾಣಿಕತೆ, ನಮ್ರತೆ, ಕಠಿಣ ಪರಿಶ್ರಮ ಇತ್ಯಾದಿ ಗುಣಗಳನ್ನು ಆಳವಡಿಸಿಕೊಂಡರೆ ಒಬ್ಬ ವ್ಯಕ್ತಿ ಏನನ್ನಾದರೂ ಸಾಧಿಸಬಹುದು. ಶಿಕ್ಷಣ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಅರಳಿಸಿ ರಾಷ್ಟ್ರ ಹಾಗೂ ಸಮಾಜಕ್ಕೆ ಸಹಕಾರಿಯಾಗಿ ಬದುಕುವಂತೆ ಮಾಡಬೇಕು ಎಂದು ಮಂಗಳೂರು ವಿಶ್ವ ವಿದ್ಯಾನಿಲಯದ ಉಪ-ಕುಲಪತಿಗಳಾದ ಪ್ರೊ. ಕೆ. ಬೈರಪ್ಪ ಅವರು ಅಭಿಪ್ರಾಯ ಪಟ್ಟರು.
ಅವರು2014-15ನೇ ಸಾಲಿನ ಪಿ.ಯು.ಸಿ. ಪರೀಕ್ಷೆಯಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಕರ್ನಾಟಕ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಮಂಗಳೂರು ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು| ರಶ್ಮಿತಾಳಿಗೆ ಕರ್ನಾಟಕದ ರಾಜ್ಯಪಾಲರಾದ ಮಾನ್ಯ ವಜೂಭಾಯಿವಾಲ ಅವರು ನೀಡಿದ ಅಭಿನಂದನಾ ಪತ್ರ ಸಮರ್ಪಣೆ ಮತ್ತು ಸನ್ಮಾನ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಬ್ಯಾಂಕಿನ ಹಿರಿಯ ಪ್ರಭಂಧಕರಾದ ಶ್ರೀ ಜಯರಾಮ ಹಂದೆಯವರು ಕು| ರಶ್ಮಿತಾಳಿಗೆ 10,000/- ರೂಪಾಯಿಗಳ ಗೌರವಧನವನ್ನು ನೀಡಿ ಗೌರವಿಸಿದರು.
ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ| ಎಂ.ಬಿ.ಪುರಾಣಿಕ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಶಾರದಾ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಶ್ರೀ. ಕೆ.ಎಸ್.ಕಲ್ಲೂರಾಯ, ಶಾರದಾ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ| ಲೀಲಾ ಉಪಾಧ್ಯಾಯ, ಶಾರದಾ ಕಾಲೇಜಿನ ಪ್ರಾಂಶುಪಾಲರಾದ ಡಾ| ಬಾಲಕೃಷ್ಣ ಭಾರಧ್ವಾಜ್, ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ಡಿ. ಶ್ರೀಪತಿ ರಾವ್, ಶಾರದಾ ಪದವಿ ಪೂರ್ವ ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ಮಹಾಬಲೇಶ್ವರ ಭಟ್ ಹಾಗೂ ಶಾರದಾ ವಿದ್ಯಾಲಯದ ಉಪ-ಪ್ರಾಂಶುಪಾಲರಾದ ಶ್ರೀ ದಯಾನಂದ ಕಟೀಲ್ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಡಾ| ಶ್ರೀಪತಿ ರಾವ್ ಅವರು ಅತಿಥಿಗಳನ್ನು ಸ್ವಾಗತಿಸಿ ಕೊನೆಯಲ್ಲಿ ಸಂಸ್ಕೃತ ಉಪನ್ಯಾಸಕ ಶ್ರೀ ರಮೇಶ ಆಚಾರ್ಯರವರು ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಅನುಪಮಾ ಕಾರ್ಯಕ್ರಮವನ್ನು ನಿರ್ವಹಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸುಮಂಗಳ ಅವರು ರಾಜ್ಯಪಾಲರು ಕಳುಹಿಸಿರುವ ಅಭಿನಂದನಾ ಪತ್ರವನ್ನು ವಾಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.