ಮುಂಬಯಿ: ಶಾಲೆ ತೊರೆದ ಎಲ್ಲಾ ಮಕ್ಕಳನ್ನು 8 ದಿನದೊಳಗೆ ಮರಳಿ ಶಾಲೆಗೆ ಕರೆತರಬೇಕು ಎಂದು ಮಹಾರಾಷ್ಟ್ರ ಶಿಕ್ಷಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಜಿಲ್ಲಾಧಿಕಾರಿ ಕಛೇರಿಗಳ ಮತ್ತು ನಗರ ಪಾಲಿಕೆಗಳ ಸಿಇಓ ಹಾಗೂ ಕಮಿಷನರ್ಗಳಿಗೆ ತಾಕೀತು ಮಾಡಿದ್ದಾರೆ.
ಈ ಬಗ್ಗೆ ಪತ್ರ ಹೊರಡಿಸಿರುವ ಅವರು, ‘ಶಾಲೆ ತೊರೆದು ಮಕ್ಕಳು ತಮ್ಮ ಕೂಲಿಕಾರ್ಮಿಕ ಪೋಷಕರೊಂದಿಗೆ ಇರುವುದನ್ನು ನಾಣು ಕಣ್ಣಾರೆ ಕಾಣುತ್ತಿದ್ದೇನೆ. ಹಾಗಿದ್ದರೂ ಅವರೇಕೆ ನಿಮ್ಮ ಕಣ್ಣಿಗೆ ಕಾಣುತ್ತಿಲ್ಲ’ ಎಂದು ಅವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಬ್ಲಾಕ್ ಮಟ್ಟದಲ್ಲಿ ಶಿಕ್ಷಣಾಧಿಕಾರಿಗಳು ಸಮೀಕ್ಷೆಯನ್ನು ನಡೆಸಿ ಶಾಲೆಯಿಂದ ಹೊರಗಿರುವ ಮಕ್ಕಳನ್ನು ಪತ್ತೆ ಮಾಡಬೇಕು, ಅವರನ್ನು ಮತ್ತೆ ಶಾಲೆಗೆ ಸೇರಿಸುವ ಕಾರ್ಯ ಮಾಡಬೇಕು. ಇದರ ನೇತೃತ್ವವನ್ನು ಪಾಲಿಕೆ, ಜಿಲ್ಲಾಡಳಿತ ತೆಗೆದುಕೊಳ್ಳಬೇಕು. ೮ ದಿನದೊಳಗೆ ಈ ಕಾರ್ಯ ನಡೆಯಬೇಕು ಎಂದು ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.