ಖರಗ್ಪುರ: ಪರಿಸರವನ್ನು ಸಂರಕ್ಷಿಸುವ ಸಲುವಾಗಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆಗಳನ್ನು ಮಾಡುವ ಬಗ್ಗೆ ಹಲವಾರು ಪ್ರಯತ್ನಗಳು ನಡೆಯುತ್ತಿವೆ. ಐಐಟಿ ಖರಗ್ಪುರ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದೆ.
ಇಲ್ಲಿನ ವಿದ್ಯಾರ್ಥಿಗಳು ಬಳಕೆಗೆ ಬಾರದ ಈರುಳ್ಳಿ ಸಿಪ್ಪೆಗಳನ್ನು ಬಳಸಿಳಿಂದ ಡಿವೈಸ್ವೊಂದನ್ನು ಅಭಿವೃದ್ಧಿ ಪಡಿಸಲಾಗಿದ್ದು, ಈ ಡಿವೈಸ್ ದೇಹದ ಚಲನವಲನಗಳಿಂದ ವಿದ್ಯುತ್ ಉತ್ಪಾದಿಸಲು ಶಕ್ತವಾಗಿದೆ. ಈ ವಿದ್ಯುತ್ನ್ನು ಪವರ್ ಪೇಸ್ಮೇಕರ್ಗಳಿಗೆ, ಸ್ಮಾರ್ಟ್ ಪಿಲ್ಸ್, ಧರಿಸಬಹುದಾದ ಎಲೆಕ್ಟ್ರಾನಿಕ್ಸ್ಗಳಿಗೆ ಬಳಸಬಹುದಾಗಿದೆ.
ವಿಷಕಾರಿಯಲ್ಲದ, ಜೈವಿಕ ಡಿವೈಸ್ ಈರುಳ್ಳಿ ಸಿಪ್ಪೆಯಲ್ಲಿ ಫಿಜೋಎಲೆಕ್ಟ್ರಿಕ್ ಅಂಶಗಳ ಪ್ರಯೋಜನವನ್ನು ಪಡೆಯುತ್ತವೆ, ಫಿಜೋಎಲೆಕ್ಟ್ರಿಕ್ಗಳು ಶಕ್ತಿಯನ್ನು ವಿದ್ಯುತ್ ಆಗಿ ಪರಿವರ್ತಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಸಂಶೋಧಕರು ಹೇಳುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.