ಬೆಂಗಳೂರು: 5 ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ 3,515 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಕೃಷಿ ಇಲಾಖೆ ನೀಡಿದ ಅಂಕಿಅಂಶಗಳಿಂದ ತಿಳಿದು ಬಂದಿದೆ.
2013ರ ಎಪ್ರಿಲ್-2017ರ ನವೆಂಬರ್ವರೆಗೆ 3,515 ರೈತರು ಆತ್ಮಹತ್ಯೆ ಶರಣಾಗಿದ್ದು, ಇವುಗಳ ಪೈಕಿ 2,525 ರೈತರು ಬರ, ಕೃಷಿ ಕೈಕೊಟ್ಟ ಪರಿಣಾಮವಾಗಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
2017ರ ಎಪ್ರಿಲ್-ನವೆಂಬರ್ ತಿಂಗಳ ನಡುವೆ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಈ ಅವಧಿಯಲ್ಲೂ ರೈತ 624 ಆತ್ಮಹತ್ಯೆ ಪ್ರಕರಣಗಳು ಬೆಳಕಿವೆ ಬಂದಿದೆ. ಇದರಲ್ಲಿ 416 ಪ್ರಕರಣಗಳು ಕೃಷಿ ಸಂಬಂಧಿ ತೊಂದರೆಯ ಕಾರಣಕ್ಕೆಯೇ ನಡೆದ ಆತ್ಮಹತ್ಯೆಗಳು ಎಂದು ವರದಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.