ನವದೆಹಲಿ: ಹಿರಿಯ ರಾಜತಾಂತ್ರಿಕ ವಿಜಯ್ ಕೇಶವ್ ಗೋಖಲೆ ಅವರನ್ನು ಸೋಮವಾರ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
1981ರ ಬ್ಯಾಚ್ನ ಐಎಫ್ಎಸ್ ಅಧಿಕಾರಿಯಾಗಿರುವ ಗೋಖಲೆ ಭಾರತದ ಚೀನಾ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ವಿದೇಶಾಂಗ ವ್ಯವಹಾರಗಳ ಹಣಕಾಸು ಸಂಬಂಧಗಳ ಕಾರ್ಯದರ್ಶಿಯಾಗಿದ್ದಾರೆ.
ಪ್ರಸ್ತುತ ವಿದೇಶಾಂಗ ಕಾರ್ಯದರ್ಶಿಯಾಗಿರುವ ಎಸ್.ಜೈಶಂಕರ್ ಅವರ ಅವಧಿ ಜ.28ಕ್ಕೆ ಅಂತ್ಯಗೊಳ್ಳಲಿದ್ದು, ಆ ಬಳಿಕ ಗೋಖಲೆ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಎರಡು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.