ದೇಶದ ಹೆಣ್ಣು ಮಕ್ಕಳಿಗೆ ಹೆಚ್ಚಿನ ಪ್ರೋತ್ಸಾಹ, ಬೆಂಬಲ, ಅವಕಾಶಗಳನ್ನು ನೀಡುವ ಸಲುವಾಗಿ ಮತ್ತು ಹೆಣ್ಣು ಮಕ್ಕಳು ಅನುಭವಿಸುತ್ತಿರುವ ಲಿಂಗ ತಾರತಮ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಕ್ಕಾಗಿ ಪ್ರತಿ ವರ್ಷ ಜ.24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ.
ಹೆಣ್ಣು ಮಗುವಿನ ವಿರುದ್ಧದ ತಾರತಮ್ಯ ಎಂಬುದು ನಮ್ಮ ಸಮಾಜಕ್ಕಂಟಿದ ಅತೀ ದೊಡ್ಡ ಪಿಡುಗು. ಶಿಕ್ಷಣ, ಸಾಮಾಜಿಕ ನ್ಯಾಯ, ಪೋಷಣೆ, ರಕ್ಷಣೆ, ಗೌರವ ಎಲ್ಲಾ ವಿಷಯದಲ್ಲೂ ಹೆಣ್ಣು ಮಗುವನ್ನು ನಿರ್ಲಕ್ಷ್ಯ ಮಾಡಲಾಗುತ್ತದೆ. ಬಾಲ್ಯ ವಿವಾಹ, ವರದಕ್ಷಿಣೆ ಪದ್ಧತಿ ಆಕೆಯ ಸುಂದರ ಬದುಕನ್ನು ನರಕ ಮಾಡುತ್ತಿವೆ.
ಭಾರತ ಸರ್ಕಾರದ ರಾಷ್ಟ್ರೀಯ ಹೆಣ್ಣುಮಕ್ಕಳ ಅಭಿವೃದ್ಧಿ ಮಿಶನ್ 2008ರಿಂದ ಪ್ರತಿ ವರ್ಷ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಣೆ ಮಾಡಿಕೊಂಡು ಬರುತ್ತಿದೆ. ಹೆಣ್ಣು ಮಕ್ಕಳಿಗೆ ಹೆಚ್ಚಿನ ಉತ್ತೇಜನ ಮತ್ತು ಅವಕಾಶಗಳನ್ನು ನೀಡುವ ಉದ್ದೇಶ ಇದರ ಹಿಂದಿದೆ.
ಹೆಣ್ಣಿನ ವಿರುದ್ಧದ ಎಲ್ಲ ತಾರತಮ್ಯಗಳನ್ನು ತೊಡೆದು ಹಾಕುವ ಮತ್ತು ಅವರ ಬಗೆಗಿನ ಸಮಾಜದ ದೃಷ್ಟಿಕೋನವನ್ನು ಬದಲಿಸುವ ಅವಶ್ಯಕತೆ ಪ್ರಸ್ತುತ ಇದೆ. ಹೆಣ್ಣು ಸಬಲ, ಸ್ವಾವಲಂಬಿಯಾದಾಗ ಮಾತ್ರ ಸಮಾಜ ಆಕೆಯನ್ನು ಹೆಚ್ಚು ಗೌರವದಿಂದ ಕಾಣುತ್ತದೆ. ಶಿಕ್ಷಣಕ್ಕೆ ಮಾತ್ರ ಆಕೆಯನ್ನು ಸ್ವಾವಲಂಬಿಯಾಗಿಸುವ ಶಕ್ತಿ ಇದೆ. ಆ ಶಿಕ್ಷಣವನ್ನು ಆಕೆಗೆ ಒದಗಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ.
ಪ್ರಸ್ತುತ ಕೇಂದ್ರ ಸರ್ಕಾರ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯ ಮೂಲಕ ಹೆಣ್ಣು ಮಗುವಿನ ಸಂರಕ್ಷಣೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಇದರಡಿ ಸುಕನ್ಯ ಸಮೃದ್ಧಿಯಂತಹ ಹಲವು ಯೋಜನೆಗಳನ್ನು ಆರಂಭಿಸಿದ್ದು, ಇದರ ಸದುದ್ದೇಶವನ್ನು ನಾಗರಿಕರು ಅರ್ಥ ಮಾಡಿಕೊಂಡು ಹೆಣ್ಣು ಮಗುವಿನ ಸಬಲೀಕರಣದತ್ತ ಹೆಜ್ಜೆ ಇಡಬೇಕು. ಹೆಣ್ಣೊಂದು ಕಲಿತರೆ ಕುಟುಮಬವೊಂದು ಕಲಿತಂತೆ ಎಂಬ ನಾಣ್ಣುಡಿಯನ್ನು ಅರ್ಥ ಮಾಡಿಕೊಳ್ಳಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.