ನವದೆಹಲಿ: ಕೇಂದ್ರ ಜಾಗೃತ ದಳ(ಸಿವಿಸಿ) ಮತ್ತು ಕೇಂದ್ರ ಮಾಹಿತಿ ಆಯೋಗ(ಸಿಐಸಿ)ಕ್ಕೆ ಆಯುಕ್ತರ ಹೆಸರನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದೆ.
ಮುಖ್ಯ ಮಾಹಿತಿ ಆಯುಕ್ತರಾಗಿ ವಿಜಯ್ ಶರ್ಮಾ ಅವರು ನೇಮಕಗೊಂಡರೆ, ಕೇಂದ್ರ ಜಾಗೃತ ದಳದ ಆಯುಕ್ತರಾಗಿ ಕೆ.ವಿ.ಚೌಧರಿ ನೇಮಕವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂತಾದ ಪ್ರಮುಖರು ಭಾಗವಹಿಸಿದ್ದರು.
ರಾಷ್ಟ್ರಪತಿಯವರ ಅಂಕಿತ ಬಿದ್ದ ಬಳಿಕ ಈ ನೇಮಕವನ್ನು ಕೇಂದ್ರ ಅಧಿಕೃತವಾಗಿ ಪ್ರಕಟಗೊಳಿಸಲಿದೆ.
ಸಿವಿಸಿ, ಸಿಐಸಿ ಮತ್ತು ಲೋಕಪಾಲಗಳಿಗೆ ಆಯುಕ್ತರನ್ನು ನೇಮಕ ಮಾಡಲು ಮೋದಿ ಸರ್ಕಾರ ವಿಳಂಬ ಮಾಡುತ್ತಿದೆ ಎಂಬ ಸಾಕಷ್ಟು ಟೀಕೆಗಳು ಕೇಳಿ ಬಂದಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.