ಎಬಿವಿಪಿ ರಾಜ್ಯ ಉಪಾಧ್ಯಕ್ಷರಾಗಿ ಕೇಶವ ಬಂಗೇರ ಪುನರ್ ಆಯ್ಕೆ – ರಾಜ್ಯ ಸಹ ಕಾರ್ಯದರ್ಶಿಯಾಗಿ ಕು|| ವಿದ್ಯಾ ಪಿ.ಎಂ., ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಕು|| ದೀಕ್ಷಿತಾ, ರಾಜೇಂದ್ರ ಹಾಗೂ ತೀಕ್ಷಿತ್ ಕುಮಾರ್ ಕೆ. ಆಯ್ಕೆ
ಧಾರವಾಡದಲ್ಲಿ ದಿನಾಂಕ 2, 3 ಮತ್ತು 4 ಫೆಬ್ರವರಿಯಂದು ನಡೆದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 37 ನೇ ರಾಜ್ಯ ಸಮ್ಮೇಳನದಲ್ಲಿ ರಾಜ್ಯ ಉಪಾಧ್ಯಕ್ಷರಾಗಿ ಕೇಶವ ಬಂಗೇರ ಅವರು ಪುನರ್ ಆಯ್ಕೆಯಾಗಿದ್ದಾರೆ. ಇವರು ಮಂಗಳೂರಿನ ಶ್ರೀ ನಾರಾಯಣಗುರು ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಮಂಗಳೂರು ವಿಭಾಗ ಪ್ರಮುಖರಾಗಿ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಜವಾಬ್ದಾರಿ ನಿರ್ವಹಿಸುತ್ತಿರುತ್ತಾರೆ.
ಅಂತೆಯೇ, 2018-19 ನೇ ಸಾಲಿಗೆ ರಾಜ್ಯ ಸಹ-ಕಾರ್ಯದರ್ಶಿಯಾಗಿ ಕು|| ವಿದ್ಯಾ ಪಿ.ಎಂ ಆಯ್ಕೆಯಾಗಿದ್ದು, ಮೂಲತಃ ಕೊಡಗು ಜಿಲ್ಲೆಯ ಗೋಣಿಕೊಪ್ಪದವರಾಗಿದ್ದು, ಕಾವೇರಿ ಪದವಿ ಕಾಲೇಜಿನಲ್ಲಿ ಬಿ.ಕಾಂ ಪದವಿ ಮುಗಿಸಿ ಪ್ರಸ್ತುತ ಉನ್ನತ ಶಿಕ್ಷಣಕ್ಕೆ ತಯಾರಿ ನಡೆಸುತ್ತಿದ್ದಾರೆ.
2018-19 ನೇ ಸಾಲಿನ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕು||ದೀಕ್ಷಿತಾ, ರಾಜೇಂದ್ರ ಹಾಗೂ ತೀಕ್ಷಿತ್ ಕುಮಾರ್ ಕೆ ಆಯ್ಕೆಯಾಗಿದ್ದು, ಕು|| ದೀಕ್ಷಿತಾ ನಗರದ ಎಸ್.ಡಿ.ಎಂ. ಕಾನೂನು ಮಹಾವಿದ್ಯಾಲಯದಲ್ಲಿ ವ್ಯಾಸಾಂಗ ಮಾಡುತ್ತಿದ್ದು ಮಹಾನಗರ ಸಹ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ರಾಜೇಂದ್ರ ನಗರದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಾಂಗ ಮಾಡುತ್ತಿದ್ದು, ಮಂಗಳೂರು ಮಹಾನಗರ ಸಹ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ತೀಕ್ಷಿತ್ ಕುಮಾರ್ ಕೆ. ಬೆಳ್ತಂಗಡಿಯ ಪ್ರಸನ್ನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮ ವ್ಯಾಸಾಂಗ ಮಾಡುತ್ತಿದ್ದು, ಬೆಳ್ತಂಗಡಿ ತಾಲ್ಲೂಕು ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ಎಬಿವಿಪಿ ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.