ರಾಯ್ಪುರ: ಪ್ರಧಾನಿ ನರೇಂದ್ರ ಮೋದಿಯವರ ಸುರಕ್ಷಿತ ತಾಯ್ತನದ ಅಭಿಯಾನ ಛತ್ತೀಸ್ಗಢಕ್ಕೆ ಹೆಚ್ಚಿನ ಅನುಕೂಲವನ್ನು ಮಾಡಿಕೊಡುತ್ತಿದೆ. ಈ ಯೋಜನೆಯ ಸಮರ್ಥ ಅನುಷ್ಠಾನದ ಪಲವಾಗಿ ಅಲ್ಲಿ 3 ಲಕ್ಷ 77 ಸಾವಿರ ಗರ್ಭಿಣಿಯರು ಉತ್ತಮ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ.
ಈ ಯೋಜನೆಯಡಿ ಗರ್ಭಿಣಿಯರಿಗೆ ಉಚಿತ ವೈದ್ಯಕೀಯ ತಪಾಸಣೆ, ಉಚಿತ ಔಷಧಿಗಳನ್ನು ನೀಡಲಾಗುತ್ತದೆ. ಖಾಸಗಿ ವೈದ್ಯರನ್ನು ಇದಕ್ಕಾಗಿ ನಿಯೋಜಿಸಿಕೊಳ್ಳಲಾಗುತ್ತಿದೆ.
ಇದುವರೆಗೆ ಅಲ್ಲಿ ಒಟ್ಟು 3 ಲಕ್ಷ 77 ಸಾವಿರ ಗರ್ಭಿನಿಯರಿಗೆ ಉಚಿತ ಸೋನೋಗ್ರಫಿ, ರಕ್ತಪರೀಕ್ಷೆ, ಮೂತ್ರ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಸಕ್ಕರೆ ಅಂಶ ಪರೀಕ್ಷೆಗಳನ್ನು ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.