ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2018ನ ದಿನಾಂಕವನ್ನು ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಘೋಷಣೆ ಮಾಡಿದೆ.
ಮೇ 12ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ.15ರಂದು ಫಲಿತಾಂಶ ಹೊರಬೀಳಲಿದೆ.
ರಾಜ್ಯದ ಒಟ್ಟು 56,696 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. 450 ಮತಗಟ್ಟೆಗಳಲ್ಲಿ ಸಂಪೂರ್ಣ ಮಹಿಳಾ ಸಿಬ್ಬಂದಿಗಳೇ ಇರಲಿದ್ದಾರೆ.
ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದ್ದು, ಅಭ್ಯರ್ಥಿಗಳು ಪ್ರಚಾರದ ವೇಳೆ ಪ್ಲಾಸ್ಟಿಕ್ಗಳನ್ನು ಬಳಸುವಂತಿಲ್ಲ, ಪರಿಸರ ಸ್ನೇಹಿಯಾಗಿ ಪ್ರಚಾರ ಕಾರ್ಯ ನಡೆಸಬೇಕೆಂದು ಆಯೋಗ ತಾಕೀತು ಮಾಡಿದೆ.
ಅಭ್ಯರ್ಥಿಗಳು ಪ್ರಚಾರಕ್ಕೆ 28 ಲಕ್ಷ ರೂಪಾಯಿಗಳಿಗಿಂತ ಹೆಚ್ಚು ವ್ಯಯ ಮಾಡದಂತೆ ಸೂಚಿಸಲಾಗಿದೆ.
ಕರ್ನಾಟಕದಲ್ಲಿ ಒಟ್ಟು 4.96 ಕೋಟಿ ಮತದಾರರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.