ಮುಂಬಯಿ: ತನ್ನ ರಾಜ್ಯದಲ್ಲಿನ ಅಪೌಷ್ಠಿಕತೆಯನ್ನು ಹೋಗಲಾಡಿಸುವ ಸಲುವಾಗಿ ಮಹಾರಾಷ್ಟ್ರದಲ್ಲಿ ‘ನ್ಯೂಟ್ರಿಷನ್ ಗಾರ್ಡನ್ ಪ್ರೋಗ್ರಾಂ’ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರನ್ವಯ ಅಂಗನವಾಡಿ ಕೇಂದ್ರಗಳಲ್ಲಿ 25,000 ಕಿಚನ್ ಗಾರ್ಡನ್ಗಳನ್ನು ಸ್ಥಾಪನೆ ಮಾಡಲಾಗುತ್ತದೆ.
ಈ ಕಿಚನ್ ಗಾರ್ಡನ್ಗಳಲ್ಲಿ ಹಣ್ಣು ಹಂಪಲು, ತರಕಾರಿಗಳನ್ನು ಬೆಳೆಯಲಾಗುತ್ತದೆ. 2 ಲಕ್ಷ ಅಂಗನವಾಡಿ ಮಕ್ಕಳಿಗೆ ಇದರ ಪ್ರಯೋಜನ ಸಿಗಲಿದೆ. ಈಗಾಗಲೇ ಈ ಯೋಜನೆ ಅನುಷ್ಠಾನಕ್ಕೆ ಬಂದಿದ್ದು, ಇದೀಗ ಅದನ್ನು 8 ಇತರ ಜಿಲ್ಲೆಗಳಿಗೆ ವಿಸ್ತರಣೆಗೊಳಿಸುವ ನಿರ್ಧಾರ ಮಾಡಲಾಗಿದೆ.
೨೦೧೫ರಲ್ಲಿ ಈ ಯೋಜನೆ ಅನುಷ್ಠಾನಕ್ಕೆ ರಾಜ್ಮಾತ ಜಿಜಾವ್ ಮದರ್-ಚೈಲ್ಡ್ ಹೆಲ್ತ್ ನ್ಯೂಟ್ರಿಷನ್ ಮಿಶನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಿಲಾಯನ್ಸ್ ಫೌಂಡೇಶನ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ಪ್ರಸ್ತುತ ಒಪ್ಪಂದವನ್ನು ನವೀಕರಣ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.