ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ರಾಜ್ಯದ ಸರ್ಕಾರಿ ಅಥವಾ ಇನ್ನಾವುದೇ ಕಾಲೇಜುಗಳಲ್ಲಿ ಎಂಬಿಬಿಎಸ್ ವೈದ್ಯ ಪದವಿ ಪಡೆದರೂ ಗ್ರಾಮೀಣ ಪ್ರದೇಶಗಳಲ್ಲಿ ಒಂದು ವರ್ಷ ಸೇವೆ ಸಲ್ಲಿಸುವುದು ಅನಿವಾರ್ಯವಾಗಲಿದೆ.
ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ. ಆರೋಗ್ಯ ಸಚಿವ ಯು.ಟಿ. ಖಾದರ್, ವೈದ್ಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ ಅವರು ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ, ವಿಧಾನಮಂಡಲವು 2012ರಲ್ಲೇ ಅನುಮೋದಿಸಿದ್ದ ’ಗ್ರಾಮೀಣ ಸೇವೆ ಕಡ್ಡಾಯ ಸೇವೆ ತರಬೇತಿ ವಿಧೇಯಕ-2012’ದ ಅನಿವಾರ್ಯತೆಯನ್ನು ವಿವರಿಸಿದ್ದರು. ಇದೀಗ ರಾಷ್ಟ್ರಪತಿಯವರು ಅಸ್ತು ಎಂದಿದ್ದಾರೆ.
ವೈದ್ಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ‘ಸರ್ಕಾರಿ, ಡೀಮ್ಡ್ ಅಥವಾ ಖಾಸಗಿ ಕಾಲೇಜುಗಳಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ತರಬೇತಿ ಪಡೆಯಲು ಒಂದು ವರ್ಷ ಗ್ರಾಮೀಣ ಪ್ರದೇಶಗಳಿಗೆ ಹೋಗಬೇಕು. ಇಲ್ಲವಾದಲ್ಲಿ ಪ್ರಮಾಣ ಪತ್ರ ನೀಡಲಾಗುವುದಿಲ್ಲ’ ಎಂದು ಹೇಳಿದ್ದಾರೆ.
ಈ ಹಿಂದೆ ಇದ್ದಂತೆ, ಇನ್ನು ಮುಂದೆ ದಂಡ ಪಾವತಿಸಿ ಗ್ರಾಮೀಣ ಪ್ರದೇಶದ ಸೇವೆಯಿಂದ ಹೊರಬರಲು ಅವಕಾಶವಿರುವುದಿಲ್ಲ. ಎಂಬಿಬಿಎಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಒಂದು ವರ್ಷದ ತರಬೇತಿ ಬಳಸಿಕೊಳ್ಳಲು ಮಾರ್ಗಸೂಚಿ ಹೊರಡಿಸಲಾಗುವುದು. ಇನ್ನಾವುದೇ ಸ್ನಾತಕೋತ್ತರ, ಪದವಿ ಕೋರ್ಸ್ಗಳಿಗೆ ಸೇರಲು ಬಯಸಿದರೆ ಅವಕಾಶ ಕಲ್ಪಿಸಲಾಗುವುದು, ಆದರೆ ಪಿಜಿ ಅಥವಾ ಡಿಎಂ ಪೂರ್ಣಗೊಳಿಸಿದ ಬಳಿಕ ಗ್ರಾಮೀಣ ಸೇವೆ ಕಡ್ಡಾಯ ಮಾಡಲೇಬೇಕು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.
ಈ ವಿಧೇಯಕದಿಂದ ಇನ್ನಾದರೂ ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆ ನೀಗುವುದೇ ಎಂಬುದನ್ನು ನೋಡಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.