ಮುಂಬಯಿ: ಭಾರತೀಯ ಜನತಾ ಪಕ್ಷದ ಸಂಸ್ಥಾಪನ ದಿನವನ್ನು ಎಪ್ರಿಲ್ 6ರಂದು ಆಚರಿಸಲಾಗುತ್ತಿದ್ದು, ಮುಂಬಯಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ಮಹಾ ಬಿಜೆಪಿ-ಮಹಾ ಮೇಳವ ಕಾರ್ಯಕ್ರಮವನ್ನು ಬಾಂದ್ರಾದ ಕುರ್ಲಾ ಕಾಂಪ್ಲೆಕ್ಸ್ನಲ್ಲಿ ಆಯೋಜನೆಗೊಳಿಸಲಾಗಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಇದರಲ್ಲಿ ಭಾಗಿಯಾಗಲಿದ್ದಾರೆ.
ಲಕ್ಷಾಂತರ ಕಾರ್ಯಕರ್ತರು, ಬಿಜೆಪಿ ನಾಯಕರು ಈ ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
ಬಿಜೆಪಿಯ 38ನೇ ಸಂಸ್ಥಾಪಕನ ದಿನ ಇದಾಗಿದ್ದು, 2019ರ ಲೋಕಸಭಾ ಚುನಾವಣಾ ಪ್ರಚಾರಕ್ಕೂ ಇಲ್ಲಿಂದಲೇ ಅನೌಪಚಾರಿಕವಾಗಿ ಚಾಲನೆ ದೊರಕಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.