ಮುಂಬಯಿ: ಮಹಾರಾಷ್ಟ್ರವನ್ನು ಬರಮುಕ್ತಗೊಳಿಸುವ ನಿಟ್ಟಿನಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರು ಜನರಿಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಟ್ವಿಟರ್ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಅವರು ‘ಜಲಮಿತ್ರ’ ಯೋಜನೆಗೆ ಕೈಜೋಡಿವಂತೆ ಕರೆ ನೀಡಿದ್ದಾರೆ.
ಪಾನಿ ಫೌಂಡೇಶನ್ ಮಹಾರಾಷ್ಟ್ರವನ್ನು ಬರಮುಕ್ತಗೊಳಿಸುವ ನಿಟ್ಟಿನಲ್ಲಿ ‘ಜಲ್ಮಿತ್ರಾ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನೀರು ಸಂರಕ್ಷಣೆಯ ಕಾಯಕದಲ್ಲಿ ತೊಡಗಿದೆ. ಹಳ್ಳಿ ಹಳ್ಳಿಗೂ ತೆರಳಿ ಜನರಿಗೆ ನೀರನ್ನು ಸಂರಕ್ಷಿಸುವ ವಿಧಾನದ ಬಗ್ಗೆ ತರಬೇತಿ ನೀಡುತ್ತಿದೆ.
ಟ್ವಿಟರ್ನಲ್ಲಿ ಈ ಬಗ್ಗೆ ವೀಡಿಯೋ ಪೋಸ್ಟ್ ಮಾಡಿರುವ ಅಮೀರ್, ಜನರಿಗೆ ಜಲಮಿತ್ರಾದಲ್ಲಿ ಭಾಗಿಯಾಗಿ ನೀರು ಸಂರಕ್ಷಣೆ ಮಾಡುವಂತೆ ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.