ನವದೆಹಲಿ: ವಾರಣಾಸಿ ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚದ ಬಗ್ಗೆ ’ಸತ್ಯ ಮತ್ತು ನಿಖರ’ ಅಂಕಿಅಂಶಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿಯವರು ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಅವರನ್ನು ಸಂಸದ ಹುದ್ದೆಯಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದೆ.
ಎಐಸಿಸಿ ಕಾನೂನು ಘಟಕದ ಕಾರ್ಯದರ್ಶಿ ಕೆ.ಸಿ.ಮಿತ್ತಲ್ ಅವರು ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರನ್ನು ನೀಡಿದ್ದಾರೆ. ವಾರಣಾಸಿಯಲ್ಲಿ ಚುನಾವಣಾ ಪ್ರಚಾರಕ್ಕೆ ಖರ್ಚಾದ ನಿಖರ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ವಾರಾಣಸಿಯಲ್ಲಿ ತನ್ನ ಚುನಾವಣಾ ಕಛೇರಿಯನ್ನು ನವೀಕರಣಗೊಳಿಸಲು ಆದ ಖರ್ಚು, ಅಲ್ಲಿಗೆ ಪ್ರಯಾಣಿಸಲು ತಗುಲಿದ ಖರ್ಚು, ಆರ್ಎಸ್ಎಸ್ ಸ್ವಯಂಸೇವಕರನ್ನು ಬಳಕೆ ಮಾಡಿಕೊಳ್ಳಲು ಆದ ಖರ್ಚು ಈ ಎಲ್ಲವುದರ ಬಗ್ಗೆ ನಿಖರ ಮತ್ತು ಸತ್ಯ ಅಂಕಿಅಂಶಗಳನ್ನು ಮೋದಿ ಸಲ್ಲಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಇದಕ್ಕಾಗಿಯೇ ಸಂಸದ ಹುದ್ದೆಯಿಂದ ಅವರನ್ನು ಅನರ್ಹಗೊಳಿಸಬೇಕು ಎಂದು ಅದು ಆಗ್ರಹಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.