ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಪಟ್ಟಿಯಿಂದ 44 ಜಿಲ್ಲೆಗಳನ್ನು ಸರ್ಕಾರ ಹೊರಕ್ಕೆ ಇಟ್ಟಿದೆ. ಈ ಜಿಲ್ಲೆಗಳ ಪೈಕಿ ಕೆಲವು ಕಡೆ ನಕ್ಸಲ್ ಉಪಟಳ ಸಂಪೂರ್ಣ ಸ್ಥಗಿತಗೊಂಡಿದೆ, ಕೆಲವು ಜಿಲ್ಲೆಗಳಲ್ಲಿ ನಕ್ಸಲರ ಪ್ರಮಾಣ ಬಹುತೇಕ ಕಡಿಮೆಗೊಂಡಿದೆ.
ಪ್ರಸ್ತುತ 30 ಜಿಲ್ಲೆಗಳು ನಕ್ಸಲ್ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿವೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬ ತಿಳಿಸಿದ್ದಾರೆ. ಅಲ್ಲದೇ ಕಳೆದ 4 ವರ್ಷಗಳಲ್ಲಿ ಶಸ್ತ್ರಾಸ್ತ್ರ ಪಡೆಗಳು ನಕ್ಸಲ್ ಹಿಂಸಾಚಾರವನ್ನು ಹರಡದಂತೆ ತಡೆವೊಡ್ಡುವಲ್ಲಿ ಯಶಸ್ವಿಯಾಗಿವೆ ಎಂದಿದ್ದಾರೆ.
ನಕ್ಸಲ್ ವಿರೋಧಿ ನಿಯಮಗಳು ನಕ್ಸಲರ ವಿಷಯದಲ್ಲಿ ಶೂನ್ಯ ತಾಳ್ಮೆಯನ್ನು ಹೊಂದಿದ್ದು, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯವನ್ನು ಮಾಡಲಾಗುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.