ಮುಂಬಯಿ: ದೆಹಲಿ ಮತ್ತು ಮುಂಬಯಿ ನಡುವಣ ಹೊಸ ಎಕ್ಸ್ಪ್ರೆಸ್ ಹೈವೇ ರೂ.1 ಲಕ್ಷ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಅಲ್ಲದೇ ದೆಹಲಿ-ಮುಂಬಯಿ ಎಕ್ಸ್ಪ್ರೆಸ್ ವೇಗೆ ಸಂಪರ್ಕಿಸಿ ಚಂಬಲ್ ಎಕ್ಸ್ಪ್ರೆಸ್ ವೇಯನ್ನು ನಿರ್ಮಾಣ ಮಾಡುವ ಯೋಜನೆಯೂ ಸರ್ಕಾರದ ಮುಂದೆ ಇದೆ. ಚಂಬಲ್ ಎಕ್ಸ್ಪ್ರೆಸ್ ವೇಯಿಂದ ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ.
ದೆಹಲಿ ಎನ್ಸಿಆರ್ ವಾಹನದಟ್ಟನೆಯನ್ನು ತಗ್ಗಿಸಲು ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಈ ಯೋಜನೆಗಳ ಕಾಮಗಾರಿ ಬರೋಬ್ಬರಿ 35,000 ಕೋಟಿ ತಗುಲಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.