ಬೆಂಗಳೂರು : ರಾಜ್ಯದ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸರ್ಕಾರ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದೆ.
ಶಾಲಾ ಕಾಲೇಜುಗಳಲ್ಲಿ ಹಲವಾರು ಲೈಂಗಿಕ ಕಿರುಕುಳು ಮತ್ತು ಅತ್ಯಾಚಾರ ಪ್ರಕರಣಗಳು ನಡೆದಿವೆ, ಇದರಿಂದ ಆತಂಕಗೊಂಡಿರುವ ಪೋಷಕರು ದೂರುಗಳನ್ನು ಸಲ್ಲಿಸಿದ್ದರು. ಹೀಗಾಗೀ ಸರಕಾರ ಎಲ್ಲಾ ಶಾಲೆಗಳಲ್ಲಿ ಸುರಕ್ಷತೆ ಕಾಪಾಡಲು ಕಡ್ಡಾಯ ಮಾರ್ಗಸೂಚಿಗಳನ್ನು ಜಾರಿಗೊಳಿಸಿತ್ತು.
ಇದೀಗ ಪದವಿ ಪೂರ್ವ ಕಾಲೇಜುಗಳಿಗೂ ಸರಕಾರ 18 ಅಂಶಗಳ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಕಾಲೇಜುಗಳಲ್ಲಿ ಕಡ್ಡಾಯ ಸಿಸಿಟಿವಿ, ಕಾಲೇಜು ನಿರ್ಜನ ಪ್ರದೇಶದಲ್ಲಿದ್ದರೆ ಪೋಲೀಸ್ ಗಸ್ತು, ಪದವಿ ಪೂರ್ವ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರ ವಿವರಗಳನ್ನು ಹತ್ತಿರದ ಪೋಲೀಸ್ ಠಾಣೆಗೆ ಸಲ್ಲಿಸಲು ತಿಳಿಸಲಾಗಿದೆ.
ಮಾತ್ರವಲ್ಲ ಪೋಲೀಸರು ಪಾಯಿಂಟ್ ಬುಕ್ ಇಟ್ಟು ಭೇಟಿಯ ವಿವರಗಳನ್ನು ದಾಖಲಿಸುವುದು. ಅಧಿಕೃತ ಪರವಾನಗಿ ಹೊಂದಿರುವ ಭದ್ರತಾ ಸಂಸ್ಥೆಗಳ ಸಿಬ್ಬಂದಿಯನ್ನು ಮಾತ್ರ ಭದ್ರತಾ ಕೆಲಸಕ್ಕೆ ನೇಮಿಸಿಕೊಳ್ಳುವುದು, ಪ್ರತಿ ಕಾಲೇಜು ಅವಧಿ ನಂತರ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ ವಿದ್ಯಾರ್ಥಿನಿಯರಿಗೆ ಮನೆಗೆ ಹೋಗಲು ತಡವಾದ ಸಂದರ್ಭದಲ್ಲಿ ಕಾಲೇಜು ವಾಹನಗಳ ಅನುಕೂಲ ಕಲ್ಪಿಸುವುದು. ಶೈಕ್ಷಣಿಕ ಪ್ರವಾಸದಂತಹ ಸಂದರ್ಭಗಳಲ್ಲಿ ಮಹಿಳಾ ಸಿಬ್ಬಂದಿ ಇರುವುದು ಕಡ್ಡಾಯ ಮುಂತಾದ ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಅದೇನೇ ಇರಲಿ ತಡವಾಗಿಯಾದರೂ ಸರಕಾರ ಸಕಾರಾತ್ಮಕವಾಗಿ ಚಿಂತಿಸುತ್ತಿರುವುದು ಪೋಷಕರ ಮನಸ್ಸಿನಲ್ಲಿರುವ ಆತಂಕವನ್ನು ಕೊಂಚ ಕಡಿಮೆ ಆಗುವಂತೆ ಮಾಡಿದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.