ನವದೆಹಲಿ: ಕತುವಾ, ಉನ್ನಾವ್ ಅತ್ಯಾಚಾರಗಳ ಹಿನ್ನಲೆಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿ ಅವರು ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದು, ಮಹಿಳಾ ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ತಡೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನಿಭಾಯಿಸಬೇಕಾದ ರೀತಿ, ಸಾಕ್ಷಿ ಸಂಗ್ರಹ ಮತ್ತು ಸಾಕ್ಷಿ ಸಂರಕ್ಷಣೆ ಈ ಎಲ್ಲಾ ವಿಷಯಗಳ ಪೊಲೀಸ್ ಅಧಿಕಾರಿಗಳಿಗೆ ಮರು ತರಬೇತಿಯನ್ನು ನೀಡುವಂತೆ ಅವರು ವಿವರಿಸಿದ್ದಾರೆ.
ಕಾನೂನಿನನ್ವಯ ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ದೌರ್ಜನ್ಯ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲು ಸಮಯವನ್ನು ನಿಗದಿಪಡಿಸಬೇಕು. ಒಂದು ವೇಳೆ ಆರೋಪಿಗಳೊಂದಿಗೆ ಅಧಿಕಾರಿಗಳು ಕೈಜೋಡಿಸಿದ್ದು ಬೆಳಕಿಗೆ ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.