ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಮುಂಬಯಿ ಆಸ್ತಿಗಳನ್ನು ಮಹಾರಾಷ್ಟ್ರ ಸರ್ಕಾರ ವಶಕ್ಕೆ ಪಡೆದುಕೊಳ್ಳುವುದನ್ನು ಪ್ರಶ್ನಿಸಿ ದಾವೂದ್ ತಾಯಿ ಮತ್ತು ಸಹೋದರಿ ಹಾಕಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾ ಮಾಡಿದೆ.
ದಾವೂದ್ಗೆ ಸಂಬಂಧಿಸಿದ ಎಲ್ಲಾ ಆಸ್ತಿಗಳನ್ನು ಮಹಾರಾಷ್ಟ್ರ ಸರ್ಕಾರವೇ ವಶಪಡಿಸಿಕೊಳ್ಳಲಿದೆ ಎಂದು ಸುಪ್ರೀಂ ಸ್ಪಷ್ಟಪಡಿಸಿದೆ.
ಸ್ಮಗ್ಲರ್ಸ್, ವಿದೇಶಿ ವಿನಿಮಯ ವಂಚಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಇರುವ ಕಾನೂನಿನ್ವಯ 1988ರಲ್ಲಿ ಮಹಾರಾಷ್ಟ್ರ ಸರ್ಕಾರ ದಾವೂದ್ ಆಸ್ತಿ ವಶ ಪ್ರಕ್ರಿಯೆಯನ್ನು ಆರಂಭಿಸಿತ್ತು. ಆದರೆ ಇದನ್ನು ಆತನ ಸಹೋದರಿ ಹಸೀನಾ ಪರ್ಕರ್ ಮತ್ತು ತಾಯಿ ಅಮಿನ ಬಿ ಕಸ್ಕರ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಅಲ್ಲಿ ಅರ್ಜಿ ವಜಾಗೊಂಡ ಬಳಿಕ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಅಲ್ಲೂ ಅರ್ಜಿ ವಜಾಗೊಂಡಿದೆ. ಅರ್ಜಿದಾರರಿಬ್ಬರೂ ಈಗ ಮೃತಪಟ್ಟಿದ್ದಾರೆ.
ಸಂಪತ್ತಿನ ಮೂಲದ ಬಗ್ಗೆ ಮಾಹಿತಿ ಬಹಿರಂಗಪಡಿಸಿದರೆ ಆಸ್ತಿಯನ್ನು ವಾಪಾಸ್ ನೀಡುವುದಾಗಿ ಮಹಾ ಸರ್ಕಾರ ಇವರಿಬ್ಬರಿಗೆ ತಿಳಿಸಿತ್ತು. ಆದರೆ ಅವರು ಇದಕ್ಕೆ ಒಪ್ಪಿರಲಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.