ಮುಂಬಯಿ: ಮಹಾರಾಷ್ಟ್ರದ ಗ್ರಾಮೀಣ ಭಾಗ ಸಂಪೂರ್ಣ ಬಯಲು ಶೌಚ ಮುಕ್ತಗೊಂಡಿದೆ ಎಂದು ಅಲ್ಲಿನ ಸಿಎಂ ದೇವೇಂದ್ರ ಫಡ್ನವಿಸ್ ಘೋಷಿಸಿದ್ದಾರೆ.
ಕಳೆದ ಮೂರುವರೆ ವರ್ಷದಲ್ಲಿ ಗ್ರಾಮೀಣ ಭಾಗದಲ್ಲಿ ರೂ.4.5 ಕೋಟಿ ವೆಚ್ಚದಲ್ಲಿ ಸುಮಾರು 60 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದಿರುವ ಅವರು, ಗ್ರಾಮಗಳ ಅದರಲ್ಲೂ ಬರ ಪೀಡಿತ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು 2 ಲಕ್ಷ ನೀರು ಸಂರಕ್ಷಣಾ ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಎಂದಿದ್ದಾರೆ.
25 ಸಾವಿರ ಬರಪೀಡಿತ ಗ್ರಾಮಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ, 17,447 ಗ್ರಾಮಗಳನ್ನು ನೀರು ಸ್ವಾವಲಂಬಿ ಗ್ರಾಮವನ್ನಾಗಿ ಮಾಡಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.