ಹೈದರಾಬಾದ್: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬ್ಯಾಡ್ಮಿಂಟನ್ ತಾರೆಯರಾದ ಸೈನಾ ನೆಹ್ವಾಲ್, ಪಿ.ವಿ ಸಿಂಧು ಸೇರಿದಂತೆ ಹಲವಾರು ಆಟಗಾರರನ್ನು ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಶನಿವಾರ ಸನ್ಮಾನಿಸಿದರು.
ಹೈದರಾಬಾದ್ನ ಪ್ರಗತಿ ಭವನದಲ್ಲಿ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಒಟ್ಟು 18 ಆಟಗಾರರನ್ನು ಸನ್ಮಾನಿಸಲಾಯಿತು. ಈ ಆಟಗಾರರು ಕರ್ನಾಟಕ, ಆಂಧ್ರ, ಮಹಾರಾಷ್ಟ್ರ, ಕೇರಳ ರಾಜ್ಯಗಳಿಗೆ ಸೇರಿದವರಾಗಿದ್ದಾರೆ.
ದೇಶಕ್ಕೆ ಹೆಮ್ಮೆ ತಂದ ಈ ಆಟಗಾರರು ನಮಗೆ ಸ್ಫೂರ್ತಿ ಎಂದು ಈ ವೇಳೆ ಚಂದ್ರಶೇಖರ್ ರಾವ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.