ನವದೆಹಲಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ ದೇಶದಾದ್ಯಂತ ಇರುವ ಸುಮಾರು 50 ಹಳೆ ವಿದ್ಯಾರ್ಥಿಗಳು ಕೈತುಂಬಾ ವೇತನ ತಂದುಕೊಡುವ ಉದ್ಯೋಗಕ್ಕೆ ಗುಡ್ ಬೈ ಹೇಳಿ ಹೊಸ ರಾಜಕೀಯ ಪಕ್ಷವೊಂದನ್ನು ಕಟ್ಟಿದ್ದಾರೆ.
ತಮ್ಮ ಪಕ್ಷಕ್ಕೆ ಇವರು ಬಹುಜನ್ ಆಜಾದ್ ಪಾರ್ಟಿ ಎಂದು ಹೆಸರಿಟ್ಟಿದ್ದು, ಬುಡಕಟ್ಟು ಜಾತಿ/ಜನಾಂಗ, ಸೇರಿದಂತೆ ಇತರ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ, ಅವರ ಹಕ್ಕುಗಳಿಗಾಗಿ ಹೋರಾಡುವ ಗುರಿಯನ್ನು ಹೊಂದಿದ್ದಾರೆ.
ದೇಶದ ವಿವಿಧ ಐಐಟಿಗಳಲ್ಲಿ ಕಲಿತ 50 ಮಂದಿ ತಮ್ಮ ಪೂರ್ಣಾವಧಿಯ ಉದ್ಯೋಗಕ್ಕೆ ಗುಡ್ ಬೈ ಹೇಳಿ ಪಕ್ಷವನ್ನು ಸ್ಥಾಪನೆ ಮಾಡಿದ್ದಾರೆ. ತಮ್ಮ ಪಕ್ಷಕ್ಕೆ ಚುನಾವಣಾ ಆಯೋಗದ ಅನುಮೋದನೆ ಸಿಗುವುದನ್ನು ಎದುರು ನೋಡುತ್ತಿದ್ದಾರೆ.
ತಮ್ಮ ಪಕ್ಷದ ಬೆಳವಣಿಗೆಗೆ ನಿರಂತರ ಶ್ರಮಪಡಲು ಉದ್ದೇಶಿಸಿರುವ ಇವರು, 2020ರ ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸುವ ಗುರಿ ಹೊಂದಿದ್ದಾರೆ. ಆ ಬಳಿಕವಷ್ಟೇ ಲೋಕಸಭಾ ಚುನಾವಣಾ ಕಣಕ್ಕೆ ಇವರು ಧುಮುಕಲಿದ್ದಾರೆ. 2019ರ ಚುನಾವಣೆಗೆ ಸ್ಪರ್ಧಿಸುವ ಅವಸರ ಇವರಿಗಿಲ್ಲ ಎಂಬುದು ವಿಶೇಷ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.