ಬೆಂಗಳೂರು: ಕರ್ನಾಟಕ ಮೇ.12ರ ಶನಿವಾರದಂದು ಚುನಾವಣೆಯನ್ನು ಎದುರಿಸಲಿದ್ದು, ಅಭ್ಯರ್ಥಿಗಳು ಭರದ ಪ್ರಚಾರದಲ್ಲಿ ತೊಡಗಿದ್ದಾರೆ. ಚುನಾವಣಾ ಆಯೋಗವೂ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡಲು ಭಾರೀ ಪ್ರಯತ್ನ ಮಾಡುತ್ತಿದೆ.
ರಾಜ್ಯದಲ್ಲಿ ಬಿಸಿಲ ಪ್ರತಾಪ ಹೆಚ್ಚಾಗಿರುವ ಹಿನ್ನಲೆಯಲ್ಲಿ ಜನರಿಗೆ ಅನುಕೂಲವಾಗಲೆಂದು ಮತದಾನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯವರೆಗೆ ಮತದಾನ ಮಾಡಲು ಅವಕಾಶವಿದೆ.
ಬೆಳಗ್ಗೆ 7 ರಿಂದ 5 ಗಂಟೆಯವರೆಗೆ ನಡೆಯಲಿದ್ದ ಚುನಾವಣೆಯನ್ನು ಬಿಸಿಲಿನ ಕಾರಣಕ್ಕೆ ಒಂದು ಗಂಟೆ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.