ನವದೆಹಲಿ: ಮುಂದಿನ ಮೂರು ವರ್ಷದಲ್ಲಿ ವಿದೇಶಿ ಪ್ರವಾಸಿಗರ ಒಳಹರಿವನ್ನು ದ್ವಿಗುಣಗೊಳಿಸುವ ಗುರಿಯನ್ನು ಕೇಂದ್ರ ಹೊಂದಿದ್ದು, ಗುರಿ ಸಾಧನೆಗೆ ಬೇಕಾದ ಎಲ್ಲಾ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ ಎಂದು ಕೇಂದ್ರ ಪ್ರವಾಸೊದ್ಯಮ ಸಚಿವ ಕೆಜೆ ಅಲ್ಫೋನ್ಸ್ ಹೇಳಿದ್ದಾರೆ.
ಗ್ರೇಟ್ ಇಂಡಿಯನ್ ಟ್ರಾವೆಲ್ ಬಝಾರ್ ಎಕ್ಸಿಬಿಷನ್ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಕಳೆದ ವರ್ಷ ವಿದೇಶಿ ಪ್ರವಾಸಿಗರ ಒಳಹರಿವು ಶೇ.15.6ರಷ್ಟು ಏರಿಕೆಯಾಗಿದೆ. ಮುಂದಿನ ವರ್ಷದಲ್ಲಿ ಅದನ್ನು ದ್ವಿಗುಣಗೊಳಿಸುವ ಗುರಿ ಇದೆ’ ಎಂದಿದ್ದಾರೆ.
ರಾಜಸ್ಥಾನಕ್ಕೆ ಪ್ರವಾಸೋದ್ಯಮದಲ್ಲಿ ಸಾಕಷ್ಟು ಬೆಳವಣಿಗೆ ಕಾಣುವ ಅವಕಾಶವಿದೆ, ಇಲ್ಲಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಶ್ರಮಪಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.