ನವದೆಹಲಿ: ಮೇಘಾಲಯದಿಂದ ವಿವಾದಾತ್ಮಕ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ(AFSPA)ವನ್ನು ಸಂಪೂರ್ಣವಾಗಿ ತೆಗೆದು ಹಾಕಲಾಗಿದೆ ಎಂದು ಕೇಂದ್ರ ಗೃಹಸಚಿವಾಲಯ ಪ್ರಕಟನೆಯಲ್ಲಿ ಸೋಮವಾರ ಸ್ಪಷ್ಟಪಡಿಸಿದೆ.
2017ರ ಸೆಪ್ಟಂಬರ್ವರೆಗೆ ಮೇಘಾಲಯದ ಶೇ.40ರಷ್ಟು ಭೂಪ್ರದೇಶ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಕ್ಕೆ ಒಳಪಟ್ಟಿತ್ತು. ಇದೀಗ ಅದನ್ನು ಸಂಪೂರ್ಣವಾಗಿ ತೆಗೆದು ಹಾಕಲಾಗಿದೆ. ಅರುಣಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಇದನ್ನು ದುರ್ಬಲಗೊಳಿಸಲಾಗಿದೆ.
ಪ್ರಸ್ತುತ ಅರುಣಾಚಲದ 8 ಪೊಲೀಸ್ ಸ್ಟೇಶನ್ಗಳಿಗೆ ಮಾತ್ರ ಸೀಮಿತಗೊಂಡಿದೆ.
ಸಶಸ್ತ್ರ ಪಡೆಗಳ ವಿಶೇಷಾಧಿಕಾರವನ್ನು ತೆಗೆದು ಹಾಕಬೇಕು ಎಂಬುದು ಈ ಭಾಗದ ಜನರ ಬಲವಾದ ಒತ್ತಾಯವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.