ನವದೆಹಲಿ: ಸುಸ್ಥಿರ ಕೃಷಿಗಾಗಿ ರಾಷ್ಟ್ರೀಯ ಯೋಜನೆಯಡಿ ತರಲು ಉದ್ದೇಶಿಸಿರುವ ಕೇಂದ್ರ ಪ್ರಾಯೋಜಿತ ‘ನ್ಯಾಷನಲ್ ಬ್ಯಾಂಬು ಮಿಶನ್’ಗೆ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಬುಧವಾರ ಅನುಮೋದನೆಯನ್ನು ನೀಡಿದೆ.
ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 14ನೇ ಹಣಕಾಸು ಆಯೋಗ ಉಳಿದ ಅವಧಿಯಾದ 2018-19 ಮತ್ತು 2019-20ರ ಸಾಲಿನಲ್ಲಿ ‘ನ್ಯಾಷನಲ್ ಬ್ಯಾಂಬು ಮಿಶನ್’ನನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ.
ಬಿದಿರು ಉತ್ಪಾದಕರನ್ನು ಕೈಗಾರಿಕೆಯೊಂದಿಗೆ ಪರಿಣಾಮಕಾರಿಯಾಗಿ ಲಿಂಕ್ ಮಾಡಿ, ಅವರ ಕುಂದು ಕೊರತೆಗಳನ್ನು ನಿವಾರಿಸಿ ಬಿದಿರು ವಲಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವ ಗುರಿಯೊಂದಿಗೆ ಈ ಮಿಶನ್ ಜಾರಿಗೆ ಬರುತ್ತಿದೆ.
ಬಿದಿರಿರುವ ವಲಯದಲ್ಲಿನ ಕೃಷಿಕರು, ಕಲಾವಿದರು ಸೇರಿದಂತೆ ಎಲ್ಲರಿಗೂ ಇದರಿಂದ ಸಾಕಷ್ಟು ಪ್ರಯೋಜನವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.