ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಚುನಾವಣಾ ಅಖಾಡವಾಗಿರು ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳು, ಕಾರ್ಯಕರ್ತರು, ನಾಯಕರುಗಳೊಂದಿಗೆ ನಮೋ ಆಪ್ ಮೂಲಕ ಸಂಭಾಷಣೆ ನಡೆಸಿದರು.
ಚುನಾವಣಾ ಪ್ರಚಾರದಲ್ಲಿ ಬ್ಯೂಸಿಯಾಗಿರುವ ಕಾರ್ಯಕರ್ತರನ್ನು ಹುರಿದುಂಬಿಸಿದ ಮೋದಿ, ಕಾರ್ಯಕರ್ತರು ಜನರೊಂದಿಗೆ ಸಂಪರ್ಕ ಸಾಧಿಸಬೇಕು ಎಂದರು. ಅಭ್ಯರ್ಥಿಗಳಿಗೆ, ನಾಯಕರುಗಳಿಗೆ ಹಲವಾರು ಸಲಹೆಗಳನ್ನು ನೀಡಿದರು.
ಅಭಿವೃದ್ಧಿ, ವೇಗದ ಅಭಿವೃದ್ಧಿ ಮತ್ತು ಸರ್ವತೋಮುಖ ಅಭಿವೃದ್ಧಿ ಇಂದು ಕರ್ನಾಟಕಕ್ಕೆ ನಾವು ಇಟ್ಟಿಕೊಂಡಿರುವ 3 ಅಜೆಂಡಾ. ಬಿಜೆಪಿ ಅಭಿವೃದ್ಧಿಯ ರಾಜಕೀಯದಲ್ಲಿ ನಂಬಿಕೆ ಇಟ್ಟುಕೊಂಡಿದೆ. ಜನರನ್ನು ಹಾದಿ ತಪ್ಪಿಸಿ ಚುನಾವಣೆ ಗೆಲ್ಲುವ ಜಾಯಮಾನ ಬಿಜೆಪಿಯದ್ದಲ್ಲ ಎಂದರು.
ಮೇ.1ರಂದು ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಉಡುಪಿಯ ಕೃಷ್ಣ ಮಠಕ್ಕೂ ಭೇಟಿಕೊಡಲಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.