ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ‘ಉನ್ನತ್ ಭಾರತ್ ಅಭಿಯಾನ್’ನ ಎರಡನೇ ಆವೃತ್ತಿಗೆ ಗುರುವಾರ ಚಾಲನೆ ನೀಡಿದರು.
‘ಉನ್ನತ್ ಭಾರತ್ ಅಭಿಯಾನ’ದಡಿ ದೇಶದ 750 ಉನ್ನತ ಶೈಕ್ಷಣಿಕ ಸಂಸ್ಥೆಗಳು ಗ್ರಾಮಗಳನ್ನು ದತ್ತುಪಡೆದುಕೊಳ್ಳಲಿದೆ. ಅಲ್ಲಿಗೆ ವಿದ್ಯಾರ್ಥಿಗಳನ್ನು ಕಳುಹಿಸಿ ಜನರ ಜೀವನಮಟ್ಟವನ್ನು ಸುಧಾರಿಸುವ, ಅವರ ಸಮಸ್ಯೆಗಳನ್ನು ನಿವಾರಿಸುವ ಪ್ರಯತ್ನ ಮಾಡಲಿದೆ.
ಆರೋಗ್ಯ, ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಹಣಕಾಸು, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಮುಂತಾದ ಎಲ್ಲಾ ಕ್ಷೇತ್ರದಲ್ಲೂ ಗ್ರಾಮೀಣ ಜನರನ್ನು ಒಳಪಡಿಸುವ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಜಾವ್ಡೇಕರ ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.