ಬಳ್ಳಾರಿ: ಕರ್ನಾಟಕ ಮೃಗಾಲಯ ಪ್ರಾಧಿಕಾರದ ನೇತೃತ್ವದಲ್ಲಿ ಹಂಪಿ ವಿಶ್ವವಿದ್ಯಾಲಯ ಸಮೀಪದ ಕಮಲಾಪುರದಲ್ಲಿ 34 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಉದ್ಯಾನಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮೃಗೋದ್ಯಾನ ಎಂದು ಹೆಸರಿಡಲಾಗಿದೆ.
ಸುಮಾರು 142 ಹೆಕ್ಟೇರ್ ವಿಸ್ತೀರ್ಣ ಹೊಂದಿರುವ ಈ ಮೃಗೋದ್ಯಾನದ ನಿರ್ಮಾಣದ ಯೋಜನೆಯನ್ನು 2011ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಆರಂಭಿಸಿತ್ತು. ಒಟ್ಟು 34 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಉದ್ಯಾನಕ್ಕೆ ಈಗಾಗಲೇ 20 ಕೋ.ರೂ. ಮಂಜೂರಾಗಿದ್ದು, 10 ಕೋ.ರೂ. ಕಾಮಗಾರಿ ಪೂರ್ಣಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.