ಗೋರಖ್ಪುರ: ಅಧಿಕಾರಕ್ಕೆ ಬಂದ ಬಳಿಕ ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ 1 ಕೋಟಿ ಶಾಲಾ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್, ಸಮವಸ್ತ್ರ, ಕೊಡೆ ಮತ್ತು ಶೂಗಳನ್ನು ಹಂಚುವ ಕಾರ್ಯ ಮಾಡಿದೆ. ಇದಕ್ಕಾಗಿ ಅದು ರೂ. 1 ಕೋಟಿ 53 ಲಕ್ಷ ರೂಪಾಯಿಗಳನ್ನು ವ್ಯಯ ಮಾಡಿದೆ.
ಗೋರಖ್ಪುರದಲ್ಲಿ ಯೋಗಿ ಮಂಗಳವಾರ ಅಪಾರ ಸಂಖ್ಯೆಯ ಅಸಿಸ್ಟೆಂಟ್ ಟೀಚರ್ಗಳಿಗೆ ನೇಮಕಾತಿ ಪತ್ರವನ್ನು ಹಂಚಿಕೆ ಮಾಡಿದ್ದು, ಅವರಿಗೆ ಭವ್ಯ, ಸಮೃದ್ಧ ಭಾರತ ಕಟ್ಟುವ ನಿಟ್ಟಿನಲ್ಲಿ ಪ್ರತಿಜ್ಞೆ ಸ್ವೀಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಪೋಷಕರೇ ಜವಾಬ್ದಾರರಾಗಿರುತ್ತಾರೆ, ಶಿಕ್ಷಕರಿಗೂ ಈ ಕಾರ್ಯದಲ್ಲಿ ಮಹತ್ತರವಾದ ಪಾತ್ರವಿದೆ ಎಂದು ಯೋಗಿ ಪ್ರತಿಪಾದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.