ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ನರೇಂದ್ರ ಮೋದಿ ಅಪ್ಲಿಕೇಶನ್ ಮೂಲಕ ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು.
ಈ ವೇಳೆ ಮಾತನಾಡಿದ ಮೋದಿ, ಇತ್ತೀಚಿಗೆ ಶಾಂಘೈನಲ್ಲಿ ನಡೆದ ಸಭೆಯಲ್ಲಿ ಭಾರತದ ಇಬ್ಬರು ಮಹಿಳಾ ಮಂತ್ರಿ ಎಲ್ಲರ ಗಮನ ಸೆಳೆದರು, ಸುಷ್ಮಾ ಸ್ವರಾಜ್ ಮತ್ತು ನಿರ್ಮಲಾ ಸೀತಾರಾಮನ್ ಭಾರತದ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.
ನಾವು ಬೂತ್ಗಳನ್ನು ಗೆಲ್ಲಬೇಕು, ಬೂತ್ ಗೆದ್ದರೆ ವಿಧಾನಸಭಾ ಕ್ಷೇತ್ರ ಗೆಲ್ಲುತ್ತೇವೆ, ಮಹಿಳೆಯರು ಜನಸಂಪರ್ಕವನ್ನು ಸಾಧಿಸಬೇಕು ಎಂದರು.
ಮುದ್ರಾ ಯೋಜನೆಯಡಿ ಮಹಿಳೆಯರಿಗೆ ಉದ್ಯಮ ಆರಂಭಿಸಲು ಸಹಾಯ ಮಾಡಿದ್ದೇವೆ, ಸ್ಟ್ಯಾಂಡ್ ಅಪ್ ಯೋಜನೆಯಡಿ 8 ಸಾವಿರ ಕೋಟಿ ನೆರವು ನೀಡಲಾಗಿದೆ. ಹೆಣ್ಣು ಮಕ್ಕಳಿಗಾಗಿ ಆರಂಭಿಸಿ ಸುಕನ್ಯಾ ಸಮೃದ್ಧಿ ಯೋಜನೆಯಡಿ 1.26 ಕೋಟಿ ಖಾತೆ ತೆರೆಯಲಾಗಿದೆ. ರಾಜ್ಯದಲ್ಲಿ 10 ಲಕ್ಷ ಖಾತೆಗಳನ್ನು ತೆರೆಯಲಾಗಿದೆ ಎಂದರು.
ಯಡಿಯೂರಪ್ಪನವರು ಜಾರಿಗೆ ತಂದ ಭಾಗ್ಯಲಕ್ಷ್ಮೀ ಯೋಜನೆಯಡಿ 1 ಲಕ್ಷಕ್ಕೂ ಅಧಿಕ ಬಾಂಡ್ಗಳನ್ನು ವಿತರಿಸಲಾಗಿದೆ. ನಾವು ಹೆರಿಗೆ ರಜೆಯನ್ನು 3 ತಿಂಗಳಿನಿಂದ 6 ತಿಂಗಳಿಗೆ ಏರಿಕೆ ಮಾಡಿದ್ದೇವೆ ಎಂದರು.
ಸುರಕ್ಷಿತ ಮಾತೃತ್ವ ಯೋಜನೆಯಡಿ ಉಚಿತ ಆರೋಗ್ಯ ಸೇವೆ, ಇಂದ್ರಧನುಷ್ ಯೋಜನೆಯಡಿ ಉಚಿತ ಲಸಿಕಾ ಯೋಜನೆಯನ್ನು ಅನುಷ್ಠಾನಗೊಳಿಸಿದ್ದೇವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.