ಬೆಳಗಾವಿ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಸೋಮವಾರ ಬೆಳಗಾವಿಯ ಗೋಕಾಖ್ನಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ ಪೂಜಾರಿ ಪರವಾಗಿ ಮತಯಾಚನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ದೇಶ ಸಂಕಷ್ಟದಲ್ಲಿದ್ದಾಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇಟಲಿ ಹೋಗಿ ಕುಳಿತುಕೊಳ್ಳುತ್ತಾರೆ ಎಂದರು.
ದೇಶ ಬಿಕ್ಕಟ್ಟನ್ನು ಎದುರಿಸುವ ಸಂದರ್ಭ ಇಟಲಿಗೆ ಹೋಗಿ ಕುಳಿತುಕೊಳ್ಳುವ ಹವ್ಯಾಸ ರಾಹುಲ್ ಅವರಿಗಿದೆ, ನಿಮ್ಮ ಗ್ರಾಮಕ್ಕೆ ಮತ ಕೇಳಲು ಅವರು ಬಂದರೆ ಇಟಲಿಯಲ್ಲಿನ ತಾತನ ಮನೆಗೆ ಹೋಗುವಂತೆ ಹೇಳಿ, ಚುನಾವಣೆ ಮುಗಿದ ಬಳಿಕ ಮರಳುವಂತೆ ತಿಳಿಸಿ ಎಂದು ಜನರಿಗೆ ಹೇಳಿದ್ದಾರೆ.
ಸಿದ್ದರಾಮಯ್ಯನವರು ಹಣ ಮಾಡುವುದರಲ್ಲಿ ನಿಸ್ಸೀಮರೇ ಹೊರತು ಯೋಜನೆಗಳು ಸಮಪರ್ಕವಾಗಿ ಅನುಷ್ಠಾನಗೊಳಿಸುವಲ್ಲಿ ಅವರು ವಿಫಲರಾಗಿದ್ದಾರೆ. ಜನರನ್ನು ಒಡೆದು ಆಳುವುದೇ ಅವರ ಗುರಿ, ಈ ಬಾರಿ ಅವರನ್ನು ಮನೆಗೆ ಕಳುಹಿಸಬೇಕಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.