ಶ್ರೀನಗರ: ಮಹಿಳಾ ಸಬಲೀಕರಣಕ್ಕಾಗಿ ಯುವತಿಯೊಬ್ಬರು ಕಾಶ್ಮೀರದಿಂದ ಕನ್ಯಾಕುಮಾರಿಯವರೆ ಸುಮಾರು 3,600 ಕಿಲೋಮೀಟರ್ ಕಾಲ್ನಡಿಗೆ ಪೂರ್ಣಗೊಳಿಸಿದ್ದಾರೆ.
31 ವರ್ಷದ ಸೃಷ್ಟಿ ಭಕ್ಷಿ ಈ ಸಾಧನೆಯನ್ನು ಮಾಡಿದ್ದು, ಕಳೆದ ವರ್ಷ ಸಪ್ಟೆಂಬರ್ನಲ್ಲಿ ಕನ್ಯಾಕುಮಾರಿಯಿಂದ ಕಾಲ್ನಡಿಗೆ ಆರಂಭಿಸಿದ ಇವರು, ಈ ವರ್ಷದಲ್ಲಿ ಮೇ2ರಂದು ಶ್ರೀನಗರ ತಲುಪಿದ್ದಾರೆ.
ಭಾರತೀಯ ಸಮಾಜದಲ್ಲಿ ಮಹಿಳೆಯ ಸ್ಥಿತಿಗತಿಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಇವರು ಕಾಲ್ನಡಿಗೆಯನ್ನು ನಡೆಸಿದ್ದಾರೆ. ತಮ್ಮ ಪ್ರಯಾಣದುದ್ದಕ್ಕೂ ಇವರು ಗ್ರಾಮಗಳಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ, ಮಹಿಳೆ ಎದುರಿಸುವ ಸಂಕಷ್ಟಗಳ ಬಗ್ಗೆ ಜನರಿಗೆ ಅರಿವು ಮೂಡಿಸಿದ್ದಾರೆ.
ಶ್ರೀನಗರಕ್ಕೆ ಬಂದು ತಲುಪಿದ ಭಕ್ಷಿ ಅವರಿಗೆ ಸನ್ಮಾನವನ್ನೂ ಮಾಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.