ನವದೆಹಲಿ: ಮಕ್ಕಳ ಅಪೌಷ್ಠಿಕತೆಯನ್ನು ನಿವಾರಿಸುವ ಮಹತ್ವದ ಗುರಿಯೊಂದಿಗೆ ಆರಂಭಗೊಂಡಿರುವ ರಾಷ್ಟ್ರೀಯ ಪೌಷ್ಠಿಕ ಮಿಶನ್( ಪೋಷಣ್ ಅಭಿಯಾನ್)ಗಾಗಿ ವಿಶ್ವಬ್ಯಾಂಕ್ನಿಂದ 200 ಮಿಲಿಯನ್ ಡಾಲರ್ ಸಾಲವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಭಾರತ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿದೆ.
2025ರ ವೇಳೆಗೆ 0-6 ವಯಸ್ಸಿನ ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಶೇ.38.4ರಿಂದ ಶೇ.25ಕ್ಕೆ ಇಳಿಸುವ ಮಹತ್ವದ ಗುರಿಯನ್ನು ಈ ಪೋಷಣ್ ಅಭಿಯಾನ ಹೊಂದಿದೆ.
ಎಲ್ಲಾ ರಾಜ್ಯಗಳ, ಕೇಂದ್ರಾಡಳಿತ ಪ್ರದೇಶಗಳ ಸುಮಾರು 315 ಜಿಲ್ಲೆಗಳಲ್ಲಿ ಮೊದಲ ಹಂತದ ಯೋಜನೆ ಜಾರಿಗೆ ಈ ಸಾಲ ನೆರವಾಗಲಿದೆ.
ಮಾ.8ರಂದು ರಾಜಸ್ಥಾನದ ಜುಂಜುನುವಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಷಣ್ ಅಭಿಯಾನಕ್ಕೆ ಚಾಲನೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.