ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ಯಾವುದೇ ರೀತಿಯ ಆಡಳಿತ ವಿರೋಧಿ ಅಲೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರತಿಪಾದಿಸಿದ್ದಾರೆ.
ಚಾನೆಲ್ವೊಂದಕ್ಕೆ ಸಂದರ್ಶನ ನೀಡಿ ಮಾತನಾಡಿದ ಅವರು, ಚುನಾವಣೆಯ ವೇಳೆ ಜನರಿಗೆ ನೀಡಿದ ಎಲ್ಲಾ ಆಶ್ವಾಸನೆಗಳನ್ನು ಬಿಜೆಪಿ ಪೂರೈಸಿದೆ ಎಂದರು.
ತಮ್ಮ ಪಕ್ಷ ನಿರ್ವಹಿಸಿದ ಕಾರ್ಯ ಮತ್ತು ಕೊಟ್ಟ ಬರವಸೆಯನ್ನು ಈಡೇರಿಸಿದ ನಮ್ಮ ಸರ್ಕಾರ ಜನರಿಂದ ಆಶೀರ್ವಾದವನ್ನು ಪಡೆಯಲಿದೆ ಎಂದರು.
‘ನಾವು ಜನರ ಮಾತುಗಳನ್ನು ಆಲಿಸುತ್ತೇವೆ, ಅವರೊಂದಿಗೆ ಮಾತನಾಡುತ್ತೇವೆ, ಅವರಿಗೆ ಹೇಗೆ ಸಹಾಯ ಮಾಡುವುದು ಎಂಬ ಬಗ್ಗೆ ಚಿಂತನೆ ಮಾಡುತ್ತೇವೆ. ಪ್ರಧಾನಿಗಳು ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸುವುದರಲ್ಲಿ ತಪ್ಪಿಲ್ಲ. ಇದರಿಂದ ಅವರು ಜನರಿಗೆ ಹತ್ತಿರವಾಗಲು ಸಹಾಯವಾಗುತ್ತದೆ. ಹಿಂದಿನ ಪ್ರಧಾನಿಗಳು ಚುನಾವಣಾ ಸಮಾವೇಶದಲ್ಲಿ ಭಾಗವಹಿಸದೇ ಇದ್ದುದ್ದು ದುರಾದೃಷ್ಟಕರ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.