ನವದೆಹಲಿ: ತಮ್ಮ ಇಳಿ ವಯಸ್ಸಿನ ತಂದೆ ತಾಯಿಯರನ್ನು ಬಿಟ್ಟು ಹೋಗುವ ಮತ್ತು ಅವರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣಾತಿ ಕಠಿಣ ಕಾನೂನನ್ನು ತರಲು ನರೇಂದ್ರ ಮೋದಿ ಸರ್ಕಾರ ಚಿಂತನೆ ನಡೆಸಿದೆ.
ತಂದೆ ತಾಯಿಯರನ್ನು ನೋಡಿಕೊಳ್ಳದ ಮಕ್ಕಳ ಜೈಲು ಶಿಕ್ಷೆಯ ಅವಧಿಯನ್ನು 3 ತಿಂಗಳಿನಿಂದ 6 ತಿಂಗಳಿಗೆ ಏರಿಕೆ ಮಾಡಲಾಗುತ್ತಿದೆ. ಪೋಷಕರಿಗೆ ಮಾಸಿಕ 10 ಸಾವಿರ ಕೊಡುವುದನ್ನು ಕಡ್ಡಾಯಗೊಳಿಸಲು ಚಿಂತನೆ ನಡೆಸಿದೆ.
ಪೋಷಕರ ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007ನ್ನು ಪರಿಶೀಲನೆ ನಡೆಸುತ್ತಿರುವ ಸಾಮಾಝಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು, ಪೋಷಕರನ್ನು ನೋಡಿಕೊಳ್ಳದ ಕೆಟ್ಟ ಮಕ್ಕಳ ವಿರುದ್ಧ ಕಠಿಣ ಕ್ರಮ ಜಾರಿಗೊಳಿಸಲಿದೆ.
ಜೈವಿಕ ಮಕ್ಕಳಲ್ಲದೇ, ದತ್ತು ಪಡೆದುಕೊಂಡ ಮಕ್ಕಳು, ಅಳಿಯ, ಸೊಸೆ, ಮೊಮ್ಮಕ್ಕಳನ್ನೂ ಈ ಕಾನೂನಿನಡಿ ಸೇರ್ಪಡೆಗೊಳಿಸಲು ಸಚಿವಾಲಯ ನಿರ್ಧರಿಸಿದೆ. ತಮ್ಮನ್ನು ಲಾಲನೆ ಪಾಲನೆ ಜೀವಗಳನ್ನು ಅವರ ಹಿರಿ ವಯಸ್ಸಿನಲ್ಲಿ ತೊರೆದು ಹೋಗುವ ಇವರಿಗೆ ಕಠಿಣ ಸಜೆ ವಿಧಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.