ನವದೆಹಲಿ: ಪಶ್ಚಿಮಬಂಗಾಳದಲ್ಲಿ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳನ್ನು ಪ್ರಧಾನಿ ನರೇಂದ್ರ ಮೋದಿ ಬಲವಾಗಿ ಖಂಡಿಸಿದ್ದು, ಪ್ರಜಾಪ್ರಭುತ್ವ ಚುನಾವಣಾ ಫಲಿತಾಂಶಕ್ಕಿಂತ ದೊಡ್ಡದು ಎಂದಿದ್ದಾರೆ.
ಸೋಮವಾರ ನಡೆದ ಪಂಚಾಯತ್ ಚುನಾವಣೆಯ ಸಂದರ್ಭ ಪಶ್ಚಿಮಬಂಗಾಳದಲ್ಲಿ ಹಿಂಸಾಚಾರಗಳು ಭುಗಿಲೆದ್ದಿದ್ದು, 12 ಮಂದಿ ಹತ್ಯೆಯಾಗಿದ್ದಾರೆ. ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೋದಿ, ‘ಪ್ರಜಾಪ್ರಭುತ್ವಕ್ಕೆ ಹೊಡೆತ ಬಿದ್ದಿದೆ, ಬಿಜೆಪಿ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿಲ್ಲ, ಕೇವಲ ಬಿಜೆಪಿಯಲ್ಲ ಆಡಳಿತರೂಢ ಟಿಎಂಸಿ ಬಿಟ್ಟು ಎಲ್ಲಾ ಪಕ್ಷಗಳು ಸಂಕಷ್ಟಕ್ಕೀಡಾಗಿವೆ. ಇದೊಂದು ಗಂಭೀರ ವಿಷಯ. ಪಶ್ಚಿಮಬಂಗಾಳದಂತಹ ಶ್ರೇಷ್ಠ ನಾಡು ಇಂತಹ ಸ್ಥಿತಿಯನ್ನು ನೋಡುತ್ತಿರುವುದು ದುರಾದೃಷ್ಟಕರ’ ಎಂದಿದ್ದಾರೆ.
ಪ್ರಜಾಪ್ರಭುತ್ವವನ್ನು ಸಂರಕ್ಷಣೆ ಮಾಡುವುದಕ್ಕಿಂತ ಯಾವುದೇ ಚುನಾವಣೆ ದೊಡ್ಡದಲ್ಲ, ಇಂತಹ ಹಿಂಸಾಚಾರಕ್ಕೆ ಅಂತ್ಯ ಹಾಡಬೇಕಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.