ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿಎಸ್ ಯಡಿಯೂರಪ್ಪನವರು ಗುರುವಾರ ಬೆಳಿಗ್ಗೆ ರಾಜ್ಯದ ಮುಖ್ಯಮಂತ್ರಿಗಳಾಗಿ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ರಾಜ್ಯಪಾಲ ವಜುಬಾಯ್ ವಾಲಾ ಅವರು ಹಸಿರು ಶಾಲು ಹೊದ್ದ ಯಡಿಯೂರಪ್ಪನವರಿಗೆ ರಾಜಭವನದ ಗಾಜಿನ ಮನೆಯಲ್ಲಿ ಗೌಪ್ಯತಾ ಪ್ರಮಾಣವನ್ನು ಬೋಧಿಸಿದರು.
ಪ್ರಮಾಣವಚನಕ್ಕೂ ಮುನ್ನ ಯಡಿಯೂರಪ್ಪ ಅವರು ಸಂಜಯ್ ನಗರದ ರಾಧಾಕೃಷ್ಣ ದೇಗುಲದಲ್ಲಿ ಅವರು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು.
ರಾಜ್ಯದ 24ನೇ ಸಿಎಂ ಆಗಿ ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ್ದು, 3ನೇ ಬಾರಿಗೆ ಸಿಎಂ ಆಗುತ್ತಿದ್ದಾರೆ.
75 ವರ್ಷದ ಬಿ. ಎಸ್. ಯಡಿಯೂರಪ್ಪ ಅವರು ಮೊದಲನೇ ಬಾರಿ 7 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಎರಡನೇ ಬಾರಿ 3 ವರ್ಷ 61 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.