ನವದೆಹಲಿ: ಕಾಂಗ್ರೆಸ್ ಸದಸ್ಯತ್ವ ನೋಂದಾಣಿಗೆ ಸಂಬಂಧಿಸಿದ ಆನ್ಲೈನ್ ಅಪ್ಲಿಕೇಶನನ್ನು ಸೋಮವಾರ ನವದೆಹಲಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬಿಡುಗಡೆಗೊಳಿಸಿದರು.
ದೆಹಲಿಯಲ್ಲಿ ಪಕ್ಷದ ಸದಸ್ಯತ್ವವನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಆಪ್ನ್ನು ಬಿಡುಗಡೆ ಮಾಡಲಾಗಿದೆ. ಸಿಂಗ್ ಮತ್ತು ಅವರ ಪತ್ನಿ ಗುರುಶರಣ್ ಕೌರ್ ಅವರು ದೆಹಲಿ ಪ್ರದೇಶ್ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಕೇನ್ ಅವರ ಉಪಸ್ಥಿತಿಯಲ್ಲಿ ಆಪ್ ಬಿಡುಗಡೆ ಮಾಡುವ ಮೂಲಕ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು.
ಕಾಂಗ್ರೆಸ್ ಸಿದ್ಧಾಂತದ ಮೇಲೆ ನಿಜವಾದ ನಂಬಿಕೆ ಹೊಂದಿದವರಿಗಾಗಿ ಈ ಆಪ್ನ್ನು ಬಿಡುಗಡೆ ಮಾಡಲಾಗಿದೆ. ಆಂಡ್ರಾಯ್ಡ್ ಮೊಬೈಲ್ ಹೊಂದಿರುವವರು ಈ ಆಪ್ನ್ನು ಡೌನ್ಲೋಡ್ ಮಾಡಿ ಫಾರ್ಮ್ನ್ನು ಭರ್ತಿ ಮಾಡಿ, ಸದಸ್ಯತ್ವಕ್ಕಾಗಿ ಅರ್ಜಿ ಹಾಕಬಹುದು’ ಎಂದು ಮಕೇನ್ ತಿಳಿಸಿದ್ದಾರೆ.
ಸದ್ಯಕ್ಕೆ ಈ ಆಪ್ ದೆಹಲಿಗೆ ಮಾತ್ರ ಸೀಮಿತವಾಗಿದೆ. ಪಕ್ಷದ ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಈ ಯೋಜನೆಯನ್ನು ಜಾರಿಗೆ ತಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.