ಕೋಲ್ಕತ್ತಾ: ಕಮ್ಯೂನಿಸ್ಟರ ಭದ್ರಕೋಟೆ ಎನಿಸಿದ್ದ ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರ ಟಿಎಂಸಿ ಅಧಿಪತ್ಯವನ್ನು ಸ್ಥಾಪನೆ ಮಾಡಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ ಎಡಪಕ್ಷ ಅಲ್ಲಿ ನಿಧಾನವಾಗಿ ನೇಪಥ್ಯಕ್ಕೆ ಸರಿದು ಬಿಜೆಪಿ ಪ್ರಮುಖ ಭೂಮಿಕೆಗೆ ಬರುತ್ತಿದೆ ಎಂಬುದನ್ನು ಇತ್ತೀಚಿನ ಪಂಚಾಯತ್ ಚುನಾವಣೆ ಸಾಬೀತುಪಡಿಸಿದೆ.
ಇತ್ತೀಚಿಗಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿ ಭರ್ಜರಿ ವಿಜಯವನ್ನು ಸಾಧಿಸಿದೆ. ಪ್ರಮುಖ ವಿರೋಧ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಎಡಪಕ್ಷ ಮತ್ತು ಕಾಂಗ್ರೆಸ್ ನೆಲಕಚ್ಚಿದೆ.
ಒಟ್ಟು 29,634 ಗ್ರಾಮಸಭಾ ಸ್ಥಾನಗಳ ಪೈಕಿ ಟಿಎಂಸಿ 26,601 ಸ್ಥಾನಗಳನ್ನು ಗಳಿಸಿದೆ. ಬಿಜೆಪಿ ಶೇ.6.84ರಷ್ಟು ಸ್ಥಾನವನ್ನು ಗಳಿಸಿದೆ. ಕಾಂಗ್ರೆಸ್ 33 ಸ್ಥಾನಗಳನ್ನು ಗಳಿಸಿದೆ.
ಹಿಂಸಾಚಾರದಲ್ಲೇ ನಡೆದ ಈ ಚುನಾವಣೆ ಮಮತಾ ಬ್ಯಾನರ್ಜಿಯವರ ಆಡಳಿತ ವೈಫಲ್ಯವನ್ನೂ ಎತ್ತಿ ತೋರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.